ಪರ್ಯಾಯ:ಸರಕಾರದ ಸಾಧನೆಯ ವಸ್ತು ಪ್ರದರ್ಶನ ಉದ್ಘಾಟನೆ

Update: 2020-01-16 16:10 GMT

ಉಡುಪಿ, ಜ.16: ಪರ್ಯಾಯ ಮಹೋತ್ಸವದ ಅಂಗವಾಗಿ ಶ್ರೀಕೃಷ್ಣ ಮಠದ ಮಥುರಾ ಛತ್ರದ ಬಳಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಆಯೋಜಿಸಿರುವ ರಾಜ್ಯ ಸರ್ಕಾರದ ಸಾಧನೆಗಳನ್ನು ಬಿಂಬಿಸುವ ವಸ್ತು ಪ್ರದರ್ಶನವನ್ನು ಶಾಸಕ ರಘುಪತಿ ಭಟ್ ಗುರುವಾರ ಉದ್ಘಾಟಿಸಿದರು.

ವಸ್ತು ಪ್ರದರ್ಶನ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಶಾಸಕ ರಘುಪತಿ ಭಟ್, ರಾಜ್ಯ ಸರಕಾರದ ಸಾಧನೆಗಳ ಸಮಗ್ರ ಮಾಹಿತಿ ನೀಡುವ ಈ ವಸ್ತು ಪ್ರದರ್ಶನ ವನ್ನು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ವೀಕ್ಷಿಸುವುದರ ಮೂಲಕ, ರಾಜ್ಯದ ಜನತೆಯ ಸರ್ವತೋಮುಖ ಅಭಿವೃದ್ಧಿಗೆ ಸರಕಾರ ಕೈಗೊಂಡಿರುವ ಕಾರ್ಯಕ್ರಮಗಳು ಮತ್ತು ರೂಪಿಸಿರುವ ಯೋಜನೆಗಳ ಪ್ರಯೋಜನ ಪಡೆಯ ಬೇಕು ಎಂದರು.

ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು ಉಪಸ್ಥಿತರಿದ್ದರು.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾೆಯ ಶಿವಕುಮಾರ್ ಸ್ವಾಗತಿಸಿದರು.

ವಸ್ತು ಪ್ರದರ್ಶನದಲ್ಲಿ ಪ್ರವಾಹ ಸಂದರ್ಭ ರಾಜ್ಯ ಸರಕಾರ ಕೈಗೊಂಡ ಕ್ರಮಗಳು, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಗೆ ಕೇಂದ್ರ ಸರ್ಕಾರದ ಜೊತೆಗೆ ರಾಜ್ಯ ಸರಕಾರ ನೀಡಿರುವ ಕೊಡುಗೆ, ಸಪ್ತಪದಿ-ಸಾಮೂಹಿಕ ವಿವಾಹ ಕಾರ್ಯಕ್ರಮ, ಐಟಿಬಿಟಿ ಉದ್ದಿಮೆಗಳಿಗೆ ನೀಡಿರುವ ಕೊಡುಗೆ, ಮೀನುಗಾರರ ಸಾಲಮನ್ನಾ, ನೇಕಾರರ ಸಾಲ ಮನ್ನಾ, ಕಲ್ಯಾಣ ಕರ್ನಾಟಕ ಪರ್ವಕ್ಕೆ ಚಾಲನೆ, ಸಮಾಜ ಕಲ್ಯಾಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕಾರ್ಮಿಕ ಇಲಾಖೆ, ಅಲ್ಪಸಂಖ್ಯಾತ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿನ ಯೋಜನೆಗಳ ಸಮಗ್ರ ಮಾಹಿತಿ ಮತ್ತು ಛಾಯಾಚಿತ್ರಗಳು ಪ್ರದರ್ಶನದಲ್ಲಿವೆ. ಜ.16ರಿಂದ 18ರವರೆಗೆ 3 ದಿಗಳ ಕಾಲ ಪ್ರದರ್ಶನ ನಡೆಯಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News