ಆರ್‌ಎಎಫ್ ವಿರುದ್ಧ ಘೋಷಣೆ ಕೂಗಿದ ಆರೋಪ: ಪ್ರಕರಣ ದಾಖಲು

Update: 2020-01-16 16:31 GMT
ಫೈಲ್ ಚಿತ್ರ

ಮಂಗಳೂರು, ಜ.16: ಪೌರತ್ವ ತಿದ್ದುಪಡಿ ಕಾಯ್ದೆ, ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಮತ್ತು ರಾಷ್ಟ್ರೀಯ ಜನಸಂಖ್ಯಾ ದಾಖಲೆ (ಎನ್‌ಪಿಆರ್) ವಿರುದ್ಧ ಅಡ್ಯಾರ್ ಕಣ್ಣೂರಿನಲ್ಲಿ ಬುಧವಾರ ನಡೆದ ಪ್ರತಿಭಟನೆಯ ವೇಳೆ ಕ್ಷಿಪ್ರ ಕಾರ್ಯಾಚರಣೆ ಪಡೆ (ಆರ್‌ಎಎಫ್) ತಂಡದ ವಿರುದ್ಧ ಘೋಷಣೆ ಕೂಗಿದ ಆರೋಪದಲ್ಲಿ ಕೆಲವು ಪ್ರತಿಭಟನಾಕಾರರ ವಿರುದ್ಧ ಕಂಕನಾಡಿ ನಗರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಆರ್‌ಎಎಫ್ ತುಕಡಿ ಪ್ರತಿಭಟನಾ ಸ್ಥಳಕ್ಕೆ ಬಂದಾಗ ಅಲ್ಲಿದ್ದ ಕೆಲವರು ‘ಗೋ ಬ್ಯಾಕ್’ ಎಂದು ಘೋಷಣೆಗಳನ್ನು ಕೂಗಿದ್ದರು ಎನ್ನಲಾಗಿದೆ. ಅದರಂತೆ ಘೋಷಣೆ ಕೂಗಿದ ಪ್ರತಿಭಟನಾಕಾರರ ವಿರುದ್ಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 353ರ (ಸರಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ) ಅಡಿಯಲ್ಲಿ ಎಫ್‌ಐಆರ್ ದಾಖಲು ಮಾಡಲಾಗಿದೆ.

ಘೋಷಣೆ ಕೂಗಿದವರ ಮಾಹಿತಿ ಲಭಿಸಿಲ್ಲ. ಸುಮಾರು 50 ಮಂದಿಯ ಗುಂಪು ಆರ್‌ಎಎಫ್ ಸಿಬ್ಬಂದಿಯ ವಿರುದ್ಧ ಘೋಷಣೆ ಕೂಗಿ, ಕರ್ತವ್ಯಕ್ಕೆ ಅಡ್ಡಿಪಡಿಸಿದೆ. ಪೊಲೀಸ್ ಸಿಬ್ಬಂದಿಯ ದೂರನ್ನು ಆಧರಿಸಿ ಪ್ರಕರಣ ದಾಖಲು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News