ಪೋಲಿಯೋ ಲಸಿಕೆ ಮಾಹಿತಿ ನೀಡಲು ಮನವಿ

Update: 2020-01-16 16:46 GMT

ಮಂಗಳೂರು, ಜ.16: ‘ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವು ಜ.19ರಂದು ನಡೆಯಲಿರುವುದರಿಂದ ದ.ಕ. ಜಿಲ್ಲಾ ಆರೋಗ್ಯಾಧಿಕಾರಿಯ ಕೋರಿಕೆಯ ಮೇರೆಗೆ ಜಿಲ್ಲೆಯ ಎಲ್ಲಾ ಮಸೀದಿಗಳಲ್ಲಿ ಶುಕ್ರವಾರ ಜುಮ್ಮಾ ನಮಾಝಿನ ನಂತರ ಈ ಬಗ್ಗೆ ಮಾಹಿತಿ ನೀಡಲು ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಹಾಜಿ ಯುಕೆ ಕಣಚೂರು ಮೋನು ಮನವಿ ಮಾಡಿದ್ದಾರೆ.

5 ವರ್ಷದೊಳಗಿನ ಎಲ್ಲಾ ಮಕ್ಕಳು ಪಲ್ಸ್ ಪೋಲಿಯೋ ಹನಿ ಹಾಕಿಸಿಕೊಳ್ಳಲು ಸಮೀಪದ ಅಂಗನವಾಡಿ ಕೇಂದ್ರಕ್ಕೆ ಕರೆದುಕೊಂಡು ಹೋಗುವುದರ ಬಗ್ಗೆ ಮಾಹಿತಿ ನೀಡಿ ಕಾರ್ಯಕ್ರಮ ಯಶಸ್ವಿಗೊಳಿಸಲು ಕರೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News