ಪ್ರಧಾನ ಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಗೆ ಆಯ್ಕೆ

Update: 2020-01-16 16:50 GMT

ಮಂಗಳೂರು, ಜ.16: ಭಾರತ ಸರಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವಾಲಯದಿಂದ ಘೋಷಿಸಲಾದ ಪ್ರದಾನಮಂತ್ರಿ ಬಲ ಪುರಸ್ಕಾರ ಪ್ರಶಸ್ತಿಯು ಬೆಳ್ತಂಗಡಿಯ ಮೂರ್ಜೆ ಸುನಿತಾ ಪ್ರಭು ಅವರಿಗೆ ಒಲಿದಿದೆ. ಈ ಪುರಸ್ಕಾರ 1ಲಕ್ಷ ರೂ. ನಗದು ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ.

ಪ್ರತಿಭಾನ್ವಿತೆಯಾಗಿರುವ ಈಕೆ 2019ರಲ್ಲಿ ಫಿನೀಕ್ಸ್ (ಅಮೇರಿಕಾ)ನಲ್ಲಿ ನಡೆದ 80ನೇ ವಿಜ್ಞಾನ ಮತ್ತು ತಂತ್ರಜ್ಞಾನ ಮೇಳದಲ್ಲಿ ಭಾರತವನ್ನು ಪ್ರತಿನಿಧಿಸಿದ ಹಿನ್ನೆಲೆಯಲ್ಲಿ ಈ ಪುರಸ್ಕಾರ ಲಭಿಸಿದೆ.

ಪ್ರಸಕ್ತ ಮಂಗಳೂರಿನ ಸಿಎಫ್‌ಏಎಲ್ ವಿದ್ಯಾಸಂಸ್ಥೆಯಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿರುವ ಮೂರ್ಜೆ ಸುನಿತಾ ಪ್ರಭು, ಬೆಳ್ತಂಗಡಿಯ ವಿವೇಕಾನಂದ ಪ್ರಭು ಮತ್ತು ಶಾಂತಲಾ ಪ್ರಭು ದಂಪತಿಯ ಪುತ್ರಿ. ಉಜಿರೆ ಶ್ರೀ ಮಂಜುನಾಥೇಶ್ವರ ಸಿಬಿಎಸ್‌ಸಿ ಶಾಲೆಯ ಹಳೆ ವಿದ್ಯಾರ್ಥಿನಿ.

ರಾಷ್ಟ್ರಪತಿ ರಮಾನಾಥ್ ಕೊವಿಂದ್ ಅವರಿಂದ ಜ.22ರಂದು ರಾಷ್ಟ್ರಪತಿ ಭವನದಲ್ಲಿ ಬಾಲ ಪುರಸ್ಕಾರ ಪಡೆಯಲಿದ್ದಾರೆ. ಜೊತೆಗೆ ಜ.26ರಂದು ರಾಷ್ಟ್ರ ರಾಜಧಾನಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪೆರೇರ್‌ನಲ್ಲೂ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News