ಪೆರಿಫೆರಲ್ ರಿಂಗ್ ರಸ್ತೆ ಯೋಜನೆಗೆ ತಡೆ ನೀಡಲಾಗಿದೆ: ಹೈಕೋರ್ಟ್‌ಗೆ ಹೇಳಿಕೆ

Update: 2020-01-16 17:29 GMT

ಬೆಂಗಳೂರು, ಜ.16: ಪೆರಿಫೆರಲ್ ರಿಂಗ್ ರಸ್ತೆ ಯೋಜನೆಗೆ ಸಂಬಂಧಿಸಿದಂತೆ ಪರಿಸರ ಅನುಮತಿ ಸಿಗುವವರೆಗೆ ಯೋಜನೆಗೆ ತಡೆ ನೀಡಲಾಗಿದೆ ಎಂದು ಬಿಡಿಎ ಪರ ವಕೀಲರು ಹೈಕೋರ್ಟ್ ಗೆ ಹೇಳಿಕೆ ನೀಡಿದರು.

ಈ ಕುರಿತು ಭೂ ಮಾಲಕರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.

ಪೆರಿಫೆರಲ್ ರಿಂಗ್ ರಸ್ತೆ ಯೋಜನೆಗೆ ಸಂಬಂಧಿಸಿದಂತೆ ಈಗಾಗಲೇ ಸುಪ್ರೀಂಕೋರ್ಟ್ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದೆ. ಹೀಗಾಗಿ, ಆದೇಶ ನೀಡುವವರೆಗೂ ವಿಚಾರಣೆ ಮುಂದೂಡಬೇಕೆಂದು ಬಿಡಿಎ ಪರ ವಕೀಲರು ಮನವಿ ಮಾಡಿದರು. ವಕೀಲರ ವಾದ ಆಲಿಸಿದ ನ್ಯಾಯಪೀಠವು ಅರ್ಜಿ ವಿಚಾರಣೆಯನ್ನು ಫೆ.24ಕ್ಕೆ ಮುಂದೂಡಿತು.

ಪಿಆರ್‌ಆರ್ ತುಮಕೂರು ರಸ್ತೆಯಿಂದ ಆರಂಭಗೊಳ್ಳಲಿದ್ದು, ಆ ಭಾಗದಲ್ಲಿ ತಿಪ್ಪಗೊಂಡನಹಳ್ಳಿ ಜಲಾಶಯದ ಅಚ್ಚುಕಟ್ಟು ಪ್ರದೇಶ ಹಾಗೂ ಅರಣ್ಯ ಭೂಮಿಗೆ ಧಕ್ಕೆ ಉಂಟಾಗಲಿದೆ. ಇದು ಪರಿಸರ ಕಾಯಿದೆಯ ಸ್ಪಷ್ಟ ಉಲ್ಲಂಘನೆ ಎನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News