ಕಲಬುರ್ಗಿ ಹತ್ಯೆ ಪ್ರಕರಣ: ಸಮಗ್ರ ತನಿಖೆಗೆ ಆಗ್ರಹಿಸಿದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

Update: 2020-01-17 16:02 GMT

ಹೊಸದಿಲ್ಲಿ,ಜ.17: ಕನ್ನಡದ ಸಾಹಿತಿ ಎಂ.ಎಂ. ಕಲಬುರ್ಗಿ ಅವರ ಹತ್ಯೆ ಪ್ರಕರಣ ಹಾಗೂ ವಿಚಾರವಾದಿಗಳ ಕೊಲೆಗೆ ಸಂಚು ನಡೆಯುತ್ತಿದೆಯೆಂಬ ಆರೋಪಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

  ಕಲಬುರ್ಗಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ದೋಷಾರೋಪ ಪಟ್ಟಿ ಸೆಶನ್ಸ್ ನ್ಯಾಯಾಲಯದಲ್ಲಿ ಸಲ್ಲಿಕೆಯಾಗಿದೆಯೆಂದು ಅರ್ಜಿಯನ್ನು ವಜಾಗೊಳಿಸುತ್ತಾ ನ್ಯಾಯಾಲಯ ತಿಳಿಸಿತು. ಕಲಬುರ್ಗಿ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ಅವರ ಪತ್ನಿ ಉಮಾದೇವಿ ಸರ್ವೋಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

  2015ರ ಆಗಸ್ಟ್ 30ರಂದು ಕಲಬುರ್ಗಿ ಅವರನ್ನು ಧಾರವಾಡದಲ್ಲಿರುವ ಅವರ ನಿವಾಸದಲ್ಲಿ ಅಪರಿಚಿತ ದುಷ್ಕರ್ಮಿಯೊಬ್ಬ ಗುಂಡಿಕ್ಕಿ ಹತ್ಯೆಗೈದಿದ್ದ. ಆನಂತರ ಆತ ಮನೆಯ ಗೇಟಿನ ಬಳಿ ಕಾದು ನಿಂತಿದ್ದ ಮೋಟಾರ್‌ ಸೈಕಲ್ ಸವಾರನೊಂದಿಗೆ ಪರಾರಿಯಾಗಿದ್ದ.

 ಕಲಬುರ್ಗಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ಪೊಲೀಸರ ವಿಶೇಷ ತನಿಖಾ ತಂಡವು ಇಬ್ಬರು ಆರೋಪಿಗಳನ್ನು ಗುರುತಿಸಿತ್ತು. ಅವರಲ್ಲಿ ಒಬ್ಬಾತ 2017ರಲ್ಲಿ ನಡೆದ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಯೂ ಆಗಿದ್ದಾನೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News