ಬುಲೆಟ್ ರೈಲು ಯೋಜನೆಗೆ ರೈತರ ಆಕ್ರೋಶ: ಭೂಸ್ವಾಧೀನ ಪ್ರಕ್ರಿಯೆ ವಿರುದ್ಧ ಸುಪ್ರೀಂಕೋರ್ಟ್‌ಗೆ ಅರ್ಜಿ

Update: 2020-01-17 17:08 GMT
ಫೈಲ್ ಚಿತ್ರ

ಹೊಸದಿಲ್ಲಿ,ಜ.12: ಜಪಾನ್ ನೆರವಿನ ಭಾರತದ ಚೊಚ್ಚಲ ಹೈಸ್ಪೀಡ್ ರೈಲು ಯೋಜನೆಗಾಗಿ ನಡೆಯುತ್ತಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕೆಂದು ಕೋರಿ ರೈತರ ಗುಂಪೊಂದು ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂಕೋರ್ಟ್ ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ.

ರೈತರು ಸಲ್ಲಿಸಿರುವ ಅರ್ಜಿಗಳ ಕುರಿತು ಅಭಿಪ್ರಾಯ ಪ್ರಕಟಿಸುವಂವತೆ ನ್ಯಾಯಮೂರ್ತಿ ದೀಪಕ್ ಗುಪ್ತಾ ನೇತೃತ್ವದ ದ್ವಿಸದಸ್ಯ ಪೀಠವು ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ. ಮಾರ್ಚ್ 20ರಂದು ಸುಪ್ರೀಂಕೋರ್ಟ್ ಅರ್ಜಿಯ ವಿಚಾರಣೆಯನ್ನು ನಡೆಸಲಿದೆ.

 ಸುಪ್ರೀಂಕೋರ್ಟ್‌ನ ಈ ನಿರ್ಧಾರದಿಂದಾಗಿ ಅಹ್ಮದಾಬಾದ್ ಅನ್ನು ಭಾರತದ ವಾಣಿಜ್ಯ ರಾಜಧಾನಿ ಮುಂಬೈಗೆ ಜೋಡಿಸುವ 508 ಕಿ.ಮೀ. ವಿಸ್ತೀರ್ಣದ ಬುಲೆಟ್ ರೈಲು ಯೋಜನೆ ಇನ್ನಷ್ಟು ವಿಳಂಬವಾಗುವ ಸಾಧ್ಯತೆಯಿದೆ.

 ಬುಲೆಟ್ ರೈಲು ಯೋಜನೆಗಾಗಿ ನಡೆಯುತ್ತಿರುವ ಭೂಸ್ವಾಧೀನ ಪ್ರಕ್ರಿಯೆ ಅಕ್ರಮವೆಂದು ಆಪಾದಿಸಿ,ತಾವು ಸಲ್ಲಿಸಿದ್ದ ಅರ್ಜಿಯನ್ನು ಕೆಳ ನ್ಯಾಯಾಲಯ ತಿರಸ್ಕರಿಸಿದ್ದ ಹಿನ್ನೆಲೆಯಲ್ಲಿ ರೈತರು ಸುಪ್ರೀಂಕೋರ್ಟ್‌ನ ಮೊರೆಹೋಗಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News