ಸ್ಥಾಯಿ ಸಮಿತಿ ಚುನಾವಣೆ: ಬಿಬಿಎಂಪಿ ಕಚೇರಿ ಸುತ್ತಮುತ್ತ ನಿಷೇಧಾಜ್ಞೆ ಜಾರಿ

Update: 2020-01-17 17:57 GMT

ಬೆಂಗಳೂರು, ಜ. 17: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಹನ್ನೆರಡು ಸ್ಥಾಯಿ ಸಮಿತಿ ಸ್ಥಾನಗಳಿಗೆ ನಾಳೆ(ಜ.18) ಪಾಲಿಕೆಯ ಕೆಂಪೇಗೌಡ ಪೌರ ಸಭಾಂಗಣದಲ್ಲಿ ಚುನಾವಣೆ ನಡೆಲಿದ್ದು, ಚುನಾವಣೆ ಹಿನ್ನೆಲೆಯಲ್ಲಿ ಬಿಬಿಎಂಪಿ ಕೇಂದ್ರ ಕಚೇರಿ ಸುತ್ತಮುತ್ತ ಕಲಂ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಬಿಬಿಎಂಪಿ ಕಚೇರಿಯ 200 ಮೀ. ವ್ಯಾಪ್ತಿಯಲ್ಲಿ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯ ವರೆಗೆ ನಿಷೇಧಾಜ್ಞೆ ವಿಧಿಸಿದ್ದು, ಕಾನೂನುಭಂಗ ಉಂಟು ಮಾಡುವ ಉದ್ದೇಶದಿಂದ 5ಕ್ಕಿಂತ ಹೆಚ್ಚು ಜನರ ಗುಂಪು ಸೇರದಿರುವುದು, ಮೆರವಣಿಗೆ ಮತ್ತು ಸಭೆಗಳನ್ನು ನಡೆಸದಿರುವುದು, ಶಸ್ತ್ರಾಸ್ತ್ರಗಳು ಸೇರಿ ಮಾರಕಾಸ್ತ್ರಗಳನ್ನು ಒಯ್ಯದಂತೆ ನಿಷೇಧ ವಿಧಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News