ಪುಷ್ಪರಾಶಿ ನಡುವೆ ಮೂಡಿಬಂದ ಸ್ವಾಮಿ ವಿವೇಕಾನಂದ

Update: 2020-01-17 18:22 GMT

ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ಶುಕ್ರವಾರ ಉದ್ಘಾಟನೆಗೊಂಡ ಫಲಪುಷ್ಪ ಪ್ರದರ್ಶನದಲ್ಲಿ ಕನ್ಯಾಕುಮಾರಿಯ ಸ್ವಾಮಿ ವಿವೇಕಾನಂದ ಸ್ಮಾರಕದ ಪುಷ್ಪ ಮಾದರಿಯು ಅಪಾರ ಸಂಖ್ಯೆಯ ವೀಕ್ಷಕರನ್ನು ಆಕರ್ಷಿಸುತ್ತಿದೆ. ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ 8040 ಅಡಿ ಅಳತೆಯ ಕನ್ಯಾಕುಮಾರಿಯ ಸ್ವಾಮಿ ವಿವೇಕಾನಂದ ಸ್ಮಾರಕದ ಪುಷ್ಪ ಮಾದರಿ, ಚಿಕಾಗೋ ವಿವೇಕಾನಂದರ ಸ್ಮಾರಕದ ಪುಷ್ಪ ಮಾದರಿಯು ನೋಡುಗರ ಕಣ್ಣು ಸೆಳೆಯುತ್ತಿದ್ದು, ಇಲ್ಲಿನ ಗಾಜಿನಮನೆಯ ಪೂರ್ತಿ ವಿವೇಕವಾಣಿಯಿಂದ ಕಂಗೊಳಿಸುತ್ತಿದೆ. ತೋಟಗಾರಿಕೆ ಇಲಾಖೆ ಹಾಗೂ ಮೈಸೂರು ಉದ್ಯಾನ ಕಲಾಸಂಘ ಗಣರಾಜೋತ್ಸವದ ಅಂಗವಾಗಿ ಆಯೋಜಿಸಿರುವ ಫಲಪುಷ್ಪ ಪ್ರದರ್ಶನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದರು. ಈ ವೇಳೆ ತೋಟಗಾರಿಕೆ ಸಚಿವ ವಿ.ಸೋಮಣ್ಣ, ಮೇಯರ್ ಗೌತಮ್ ಕುಮಾರ್, ಇಲಾಖೆ ನಿರ್ದೇಶಕ ವಿ.ವೆಂಕಟೇಶ್ ಸೇರಿದಂತೆ ಹಲವರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor