ಉಪಮುಖ್ಯಮಂತ್ರಿ ಪ್ರವಾಸ

Update: 2020-01-18 15:15 GMT

ಉಡುಪಿ ಜ.18: ರಾಜ್ಯದ ಉಪ ಮುಖ್ಯಮಂತ್ರಿ ಹಾಗೂ ಲೋಕೋಪ ಯೋಗಿ ಮತ್ತು ಸಮಾಜ ಕಲ್ಯಾಣ ಇಲಾಖೆ ಸಚಿವ ಗೋವಿಂದ ಎಂ.ಕಾರ ಜೋಳ ಜ.19ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿರುವರು.

ಮಧ್ಯಾಹ್ನ 12 ಗಂಟೆಗೆ ಉಡುಪಿಯಲ್ಲಿ ಪರಿಶಿಷ್ಟ ಜಾತಿ ಧಾರ್ಮಿಕ ಸಭೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ, 2 ಗಂಟೆಗೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ, 3 ಗಂಟೆಗೆ ಉಡುಪಿಯಲ್ಲಿ ಉಡುಪಿ ಜಿಲ್ಲಾ ಮರಾಠಿ ಯುವ ಸಂಘಟನೆ ಹಾಗೂ ಮಹಿಳಾ ವೇದಿಕೆ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ, ನಂತರ ಮಂಗಳೂರಿಗೆ ತೆರಳಿರುವರು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News