ಅಪರಾಧದ ವೇಳೆ ಅಪ್ರಾಪ್ತ ವಯಸ್ಕನೆಂದು ಮೇಲ್ಮನವಿ : ಸು.ಕೋರ್ಟ್‌ನಿಂದ ನಿರ್ಭಯಾ ಆರೋಪಿಯ ಅರ್ಜಿ ವಿಚಾರಣೆ

Update: 2020-01-18 16:22 GMT

ಹೊಸದಿಲ್ಲಿ,ಡಿ.18: 2012ರ ನಿರ್ಭಯಾ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣ ನಡೆದ್ಲ ಸಂದರ್ಭದಲ್ಲಿ ತಾನು ಅಪ್ರಾಪ್ತ ವಯಸ್ಕನಾಗಿದ್ದೆನೆಂದು ಗಲ್ಲು ಶಿಕ್ಷೆಗೆ ಗುರಿಯಾಗಿರುವ ಆರೋಪಿಗಳಲ್ಲಿ ಒಬ್ಬನಾದ ಪವನ್‌ಗುಪ್ತಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸೋಮವಾರ ನಡೆಸಲು ಸುಪ್ರೀಂಕೋರ್ಟ್ ಸಮ್ಮತಿಸಿದೆ.

ಅಪರಾಧ ನಡೆದ ಸಂದರ್ಭದಲ್ಲಿ ತಾನು ಅಪ್ರಾಪ್ತ ವಯಸ್ಕನಾಗಿದ್ದೆನೆಂಬ ತನ್ನ ವಾದವನ್ನು ದಿಲ್ಲಿ ಹೈಕೋರ್ಟ್‌ ತಿರಸ್ಕರಿಸಿದ ಒಂದು ತಿಂಗಳ ಪವನ್ ಗುಪ್ತಾ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾನೆ.

 ಆತನ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್‌ನ ತ್ರಿಸದಸ್ಯ ನ್ಯಾಯಪೀಠವು ಸೋಮವಾರ ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ.

   ನಿರ್ಭಯಾ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ದಿಲ್ಲಿಯ ನ್ಯಾಯಾಲಯವು ನಾಲ್ವರು ಆರೋಪಿಗಳಿಗೆ ಜನವರಿ 22ಕ್ಕೆ ಗಲ್ಲುಶಿಕ್ಷೆಯನ್ನು ನಿಗದಿಪಡಿಸಿತ್ತು. ಆದರೆ ಆರೋಪಿಗಳಲ್ಲಿ ಒಬ್ಬನಾದ ಮುಕೇಶ್‌ಸಿಂಗ್ ಕ್ಷಮಾದಾನ ಕೋರಿ ರಾಷ್ಟ್ರಪತಿಗೆ ಮನವಿ ಸಲ್ಲಿಸಿದ್ದ. ಆತನ ಮನವಿಯನ್ನು ರಾಷ್ಟ್ರಪತಿ ಕೋವಿಂದ್ ಶುಕ್ರವಾರ ತಿರಸ್ಕರಿಸಿದ್ದರು. ಇದರಿಂದಾಗಿ ನಾಲ್ವರು ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಡೆತ್‌ವಾರಂಟ್ ಹೊರಡಿಸುವಲ್ಲಿ ವಿಳಂಬವಾಗಿತ್ತು. ಇದೀಗ ಅವರನ್ನು ಫೆಬ್ರವರಿ 1ರಂದು ಬೆಳಗ್ಗೆ 6:00 ಗಂಟೆಗೆ ಗಲ್ಲಿಗೇರಿಸಲು ದಿನ ನಿಗದಿಪಡಿಸಲಾಗಿದೆ.

 ವಿನಯ್ ಶರ್ಮಾ ಹಾಗೂ ಅಕ್ಷಯ್ ಕುಮಾರ್ ಸಿಂಗ್ ಪ್ರಕರಣದ ಇನ್ನಿಬ್ಬರು ಆರೋಪಿಗಳಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News