ಜ.20ರಿಂದ ಮುಖ್ಯಮಂತ್ರಿ ಯಡಿಯೂರಪ್ಪ ವಿದೇಶ ಪ್ರವಾಸ

Update: 2020-01-18 17:00 GMT

ಬೆಂಗಳೂರು, ಜ. 18: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಜ.20 ರಿಂದ ಐದು ದಿನಗಳ ವಿದೇಶಿ ಪ್ರವಾಸ ಕೈಗೊಳ್ಳಲಿದ್ದು, ಸ್ವಿಡ್ಜರ್‌ಲ್ಯಾಂಡ್‌ನ ದಾವೂಸ್‌ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಬೆಳಗ್ಗೆ 10:25ರ ಸುಮಾರಿಗೆ ಬೆಂಗಳೂರಿನ ಕೆಂಪೇಗೌಡ ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ತೆರಳಲಿದ್ದು, ಅಲ್ಲಿಂದ ಸ್ವಿಡ್ಜರ್ ಲ್ಯಾಂಡ್‌ನ ದಾವೂಸ್‌ಗೆ ರಾತ್ರಿ ಪ್ರಯಾಣ ಬೆಳೆಸಲಿದ್ದಾರೆಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ.

ಜ.20ರ ಸೋಮವಾರ ಬೆಳಗ್ಗೆ ವಿಶ್ವ ಆರ್ಥಿಕ ಶೃಂಗಸಭೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಮೂರು ದಿನಗಳ ಕಾಲ ದಾವೂಸ್‌ನಲ್ಲಿ ವಾಸ್ತವ್ಯ ಹೂಡಲಿದ್ದು, ವಿಶ್ವ ಶೃಂಗಸಭೆ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದು, ಜ. 24ರಂದು ಕರ್ನಾಟಕ ರಾಜ್ಯಕ್ಕೆ ಹಿಂದಿರುಗಲಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪನವರೊಂದಿಗೆ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್ ಭಾಸ್ಕರ್, ಐಟಿ-ಬಿಟಿ ಇಲಾಖೆ ಹೆಚ್ಚುವರಿ ಮುಖ್ಯಕಾರ್ಯಕದರ್ಶಿ ಡಾ.ಇ.ವಿ.ರಮಣರೆಡ್ಡಿ, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತ, ಸಿಎಂ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾ್ ಭಾಗವಹಿಸಲಿದ್ದಾರೆಂದು ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News