×
Ad

ಕಳವು ಪ್ರಕರಣ : ಇಬ್ಬರು ಆರೋಪಿಗಳು ಸೆರೆ

Update: 2020-01-18 22:47 IST

ಉಳ್ಳಾಲ : ಇಲ್ಲಿನ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ  ಇಬ್ಬರು ಆರೋಪಿಗಳನ್ನು ಉಳ್ಳಾಲ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು  ಮದನಿ ನಗರ ನಿವಾಸಿ ಕಬೀರ್ ತಸ್ಲೀಂ (21) ಮತ್ತು ಮಾಸ್ತಿಕಟ್ಟೆ ನಿವಾಸಿ ಹಾರೀಸ್ (23)ಎಂದು ಗುರುತಿಸಲಾಗಿದೆ.

ಬಂಧಿತ ಆರೋಪಿಗಳಿಂದ ಸುಮಾರು 60 ಗ್ರಾಂ ತೂಕದ ಚಿನ್ನಾಭರಣ ಹಾಗೂ ಒಂದು ಲ್ಯಾಪ್‍ಟ್ಯಾಪ್‍ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಕಳವು ಪ್ರಕರಣಗಳಿಗೆ ಸಂಬಂಧಪಟ್ಟಂತೆ ಇನ್ನೂ ಇಬ್ಬರು ಆರೋಪಿಗಳಾದ ಪುತ್ತೂರಿನ ಅನ್ವರ್ ಹಾಗೂ ಮದನಿನಗರದ ಸಿಯಾಲ್‍ ಎಂಬವರು ತಲೆಮರೆಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News