ಬಿಜೆಪಿಗೆ ದಲಿತರ ಬಗ್ಗೆ ಕಾಳಜಿ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Update: 2020-01-19 14:20 GMT

ಬೆಂಗಳೂರು, ಜ.19: ಬಿಜೆಪಿ ಪಕ್ಷಕ್ಕೆ ದಲಿತ ಸಮುದಾಯದ ಬಗ್ಗೆ ಯಾವುದೇ ಕಳಾಜಿ ಇಲ್ಲ. ಭಾವನಾತ್ಮಕವಾಗಿ ಪ್ರಚೋದಿಸಲು ಹೇಳಿಕೆಗಳನ್ನು ನೀಡುತ್ತಾರೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ರವಿವಾರ ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಭಾವನಾತ್ಮಕವಾಗಿ ಪ್ರಚೋದಿಸಲು ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ. ಅಲ್ಲದೆ, ದಲಿತರು ಐದು ಸಾವಿರ ವರ್ಷಗಳಿಂದ ತುಳಿತಕ್ಕೆ ಒಳಗಾಗಿದ್ದಾರೆ ಎಂದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಹುಬ್ಬಳ್ಳಿಯಲ್ಲಿ ರಾಜ್ಯಕ್ಕೆ ಸಂಬಂಧಿಸಿದ ವಿಚಾರ ಪ್ರಸ್ತಾಪಿಸಲಿಲ್ಲ. ಕಳಸಾ ಬಂಡೂರಿ ನಾಲೆ ಯೋಜನೆ ಬಗ್ಗೆ ಮಾತಾಡಲಿಲ್ಲ. ಇದರ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಅಮಿತ್ ಶಾ ಅವರಿಗೆ ಕೇಳಬೇಕಿತ್ತು ಎಂದು ತಿಳಿಸಿದರು.

ಕೆಪಿಸಿಸಿಗೆ ಅಧ್ಯಕ್ಷರ ಆಯ್ಕೆ ವಿಚಾರ ಪ್ರಸ್ತಾಪಿಸಿದ ಅವರು, ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧ. ಅವರ ತೀರ್ಮಾನಕ್ಕಾಗಿ ಕಾದು ನೋಡುತ್ತೇವೆ. ನಮಗೆ ಆ ಬಗ್ಗೆ ಇನ್ನೂ ಮಾಹಿತಿ ಇಲ್ಲ ಎಂದು ಖರ್ಗೆ ನುಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News