ಮಾದಕ ವಸ್ತು ಮಾರಾಟ ಆರೋಪ: ಇಬ್ಬರ ಬಂಧನ

Update: 2020-01-19 14:34 GMT

ಬೆಂಗಳೂರು, ಜ.19: ಮಾದಕ ವಸ್ತು ಮಾರಾಟ ಆರೋಪದಡಿ ಇಬ್ಬರನ್ನು ಬಂಧಿಸಿರುವ ಇಲ್ಲಿನ ಡಿಜೆಹಳ್ಳಿ ಠಾಣಾ ಪೊಲೀಸರು, 3 ಲಕ್ಷ ರೂ. ಮೌಲ್ಯದ ಮಾದಕ ವಸ್ತು ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ನಗರದ ನಿವಾಸಿಗಳಾದ ಮಿಥುನ್ ದಿಗಲ್ ಹಾಗೂ ಟಿ.ಪಾಷಾ ಬಂಧಿತ ಆರೋಪಿಗಳೆಂದು ಪೊಲೀಸರು ತಿಳಿಸಿದ್ದಾರೆ.

ಅಕ್ರಮವಾಗಿ ನಗರಕ್ಕೆ ಮಾದಕ ವಸ್ತು ಆಮದು ಮಾಡಿಕೊಂಡು, ಚಿಕ್ಕ-ಚಿಕ್ಕ ಪ್ಯಾಕೆಟ್‌ಗಳ ಮೂಲಕ, ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಸಂಗ್ರಹಿಸಿದ ಪೊಲೀಸರು, ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಗಳಿಂದ ಮಾದಕ ವಸ್ತು ಜಪ್ತಿ ಮಾಡಿದ್ದು, ತನಿಖೆ ಮುಂದುವರೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News