5ಲಕ್ಷ ಕೋ.ರೂ.ವೆಚ್ಚದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಯೋಜನೆ: ಸಚಿವ ಗಡ್ಕರಿ

Update: 2020-01-19 15:57 GMT

ನಾಗ್ಪುರ,ಜ.19: ಈ ವರ್ಷ ಮೂಲಸೌಕರ್ಯ ಅಭಿವೃದ್ಧಿಗಾಗಿ ಐದು ಲ.ಕೋ.ರೂ.ಗಳನ್ನು ವೆಚ್ಚ ಮಾಡಲು ತನ್ನ ಸಚಿವಾಲಯವು ಯೋಜಿಸಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರು ರವಿವಾರ ಇಲ್ಲಿ ತಿಳಿಸಿದರು.

ವಿಶ್ವೇಶ್ವರಯ್ಯ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯ ವಜ್ರ ಮಹೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡುತ್ತಿದ್ದ ಅವರು,ಕಳೆದ ಐದು ವರ್ಷಗಳಲ್ಲಿ ತನ್ನ ಸಚಿವಾಲಯವು 17 ಲ.ಕೋ.ರೂ.ಗಳ ಕಾಮಗಾರಿಗಳ ಗುತ್ತಿಗೆಗಳನ್ನು ನೀಡಿದೆ. ಈ ವರ್ಷ ಮೂಲಸೌಕರ್ಯ ಅಭಿವೃದ್ಧಿಗಾಗಿ ಐದು ಲ.ಕೋ.ರೂ.ಗಳನ್ನು ವೆಚ್ಚಮಾಡುವ ಉದ್ದೇಶವಿದೆ. ಹಣದ ಯಾವುದೇ ಕೊರತೆಯಿಲ್ಲ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News