ಪ್ರವಾಸೋದ್ಯಮದಲ್ಲಿ ಮಂಗಳೂರನ್ನು ಉತ್ತುಂಗಕ್ಕೇರಿಸುವ ಗುರಿ: ಶಾಸಕ ಕಾಮತ್

Update: 2020-01-19 17:16 GMT

ಮಂಗಳೂರು, ಜ.19: ನಗರ ದಕ್ಷಿಣ ವಿಧಾನ ಸಭಾ ಕ್ಷೇತ್ರದಲ್ಲಿ ಪ್ರವಾಸೋದ್ಯಮಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಶನಿವಾರ ಅಧಿಕಾರಿಗಳ ಸಭೆಯು ಶಾಸಕರ ಕಚೇರಿಯಲ್ಲಿ ನಡೆಯಿತು.

ಈ ಸಂದರ್ಭ ಮಾತನಾಡಿದ ಅವರು ಮಂಗಳೂರಿನಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ವಿವಿಧ ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ. ಕ್ಷೇತ್ರ ವ್ಯಾಪ್ತಿಯ 6 ಕುದ್ರುಗಳನ್ನು ಪ್ರವಾಸೋದ್ಯಮಕ್ಕೆ ಪೂರಕವಾಗಿ ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗಿದೆ ಎಂದರು.

ಕಂದಾಯ ಇಲಾಖೆಯಡಿ 3 ಕುದ್ರು ಹಾಗೂ ಬಂದರು ಇಲಾಖೆಯಡಿ 3 ಕುದ್ರುಗಳಿದೆ.ಅವುಗಳನ್ನು ಅಭಿವೃದ್ಧಿಗೊಳಿಸಲು ಯೋಜನೆ ರೂಪಿಸಲಾಗುತ್ತಿದೆ. ಕುದ್ರುಗಳ ಅಭಿವೃದ್ಧಿಗೊಳಿಸಲು ಬೇಕಿರುವ ಜಾಗದ ಸರ್ವೆ ನಡೆಸಿ ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಂದಾಯ ಇಲಾಖೆ ಹಾಗೂ ಬಂದರು ಇಲಾಖೆಯ ಅಧೀನಕ್ಕೊಳಪಟ್ಟಿರುವ ಜಾಗವನ್ನು ಅಭಿವೃದ್ಧಿಪಡಿಸಲು ಪ್ರವಾಸೋದ್ಯಮ ಇಲಾಖೆಗೆ ಕರಾರು ಪ್ರಸ್ತಾವನೆ ಸಲ್ಲಿಸಲು ತಿಳಿಸಲಾಗಿದೆ. ಸುಲ್ತಾನ್ ಬತ್ತೇರಿಯಿಂದ ಕಣ್ಣೂರುವರೆಗಿನ ಜೆಟ್ಟಿಗಳನ್ನು ಅಭಿವೃದ್ಧಿಪಡಿ ಸಲು ಯೋಜನೆ ರೂಪಿಸಲಾಗುವುದು ಎಂದು ಶಾಸಕ ಕಾಮತ್ ನುಡಿದರು.

ನಗರ ವ್ಯಾಪ್ತಿಯಲ್ಲಿ 6 ಕುದ್ರುಗಳ ಅಭಿವೃದ್ಧಿಯ ರೂಪುರೇಷೆ ಸಿದ್ಧಪಡಿಸಲಾಗಿದೆ. ಮುಂದಿನ ದಿನಗಳಲ್ಲಿ ಕ್ಷೇತ್ರವನ್ನು ಪ್ರವಾಸೋ ದ್ಯಮ ತಾಣವನ್ನಾಗಿ ಪರಿವರ್ತಿಸುವ ಉದ್ಧೇಶವಿದೆ. ಪ್ರವಾಸೋದ್ಯಮದಲ್ಲಿ ಮಂಗಳೂರನ್ನು ವಿಶ್ವಮಟ್ಟಕ್ಕೇರಿಸುವುದು ಗುರಿ ಹಾಕಲಾಗಿದೆ ಎಂದು ಕಾಮತ್ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News