ಮಂಗಳೂರು - ಹೈದರಾಬಾದ್ ವಿಮಾನಯಾನ ರದ್ದು

Update: 2020-01-20 11:52 GMT
ಸಾಂದರ್ಭಿಕ ಚಿತ್ರ

ಮಂಗಳೂರು: ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೈದರಾಬಾದ್ ಗೆ ಸೋಮವಾರ ಸಂಜೆ 4 ಗಂಟೆಗೆ ಹೊರಡಬೇಕಿದ್ದ ಇಂಡಿಗೋ ಎಕ್ಸ್ ಪ್ರೆಸ್ ವಿಮಾನವು ರದ್ದಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂಬ ಬೆದರಿಕೆ ಕರೆ ಬಂದಿರುವುದರಿಂದ ವಿಮಾನ ಪ್ರಯಾಣವನ್ನು ರದ್ದುಗೊಳಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News