ಯುವ ಪರಿವರ್ತಕರ ಹುದ್ದೆಗೆ ಅರ್ಜಿ ಆಹ್ವಾನ

Update: 2020-01-20 14:01 GMT

ಉಡುಪಿ, ಜ.20: ಉಡುಪಿ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜನ ಆರೋಗ್ಯ ಕೇಂದ್ರ ಎಪಿಡೀಮೀಯಾಲಜಿ ವಿಭಾಗ, ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ಬೆಂಗಳೂರು (ನಿಮ್ಹಾನ್ಸ್) ಇವರ ಸಹಯೋಗದೊಂದಿಗೆ ಆರಂಭಿಸಲಾಗಿರುವ ಯುವ ಸ್ಪಂದನ ಕೇಂದ್ರದಲ್ಲಿ ಯುವ ಪರಿವರ್ತಕರಾಗಿ ಕಾರ್ಯನಿರ್ವಹಿಸಲಿಚ್ಛಿಸುವ 21ರಿಂದ 35ವರ್ಷದೊಳಗಿನ ಯುವಕ/ ಯುವತಿಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಯುವ ಸ್ಪಂದನ ಕೇಂದ್ರದಲ್ಲಿ ಯುವ ಪರಿವರ್ತಕರಾಗಿ ಕಾರ್ಯನಿರ್ವಹಿ ಸುವವರು ಯುವ ಜನರ ಪ್ರೌಢಾವಸ್ಥೆಯ ಸಮಸ್ಯೆಗಳು ಸೇರಿದಂತೆ ಹಲವು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಬಗ್ಗೆ ಸಾರ್ವಜನಿಕ ಅರಿವು ಕಾರ್ಯಕ್ರಮವನ್ನು ಆಯೋಜಿಸುವಲ್ಲಿ ಶ್ರಮಿಸಬೇಕಾಗುತ್ತದೆ.

ಪದವಿ ತೇರ್ಗಡೆ ಹೊಂದಿದ ಆಸಕ್ತ ಯುವಕ- ಯುವತಿಯರು ತಮ್ಮ ಸ್ವ-ವಿವರಗಳೊಂದಿಗೆ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ಇಲ್ಲಿಗೆ ಜ.23ರೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿ ಗಳು ಸ್ಥಳೀಯರಾಗಿದ್ದು, ಕನ್ನಡದಲ್ಲಿ ಸ್ಪಷ್ಟವಾಗಿ ಮಾತನಾಡಲು ಮತ್ತು ಸಂವಹನ ಕಲೆಯನ್ನು ಅರಿತಿರಬೇಕು. ಆಯ್ಕೆಯಾದ ಅ್ಯರ್ಥಿಗಳಿಗೆ ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ಬೆಂಗಳೂರು (ನಿಮ್ಹಾನ್ಸ್) ಇಲ್ಲಿ ತರಬೇತಿ ನೀಡಲಾಗುವುದು.

ಈ ಕುರಿತ ಹೆಚ್ಚಿನ ಮಾಹಿತಿಗಾಗಿ ಯುವ ಸ್ಪಂದನ ಕೇಂದ್ರದ ದೂರವಾಣಿ ಸಂಖ್ಯೆ: 0820-2533933ನ್ನು  ಬೆಳಗ್ಗೆ 10ರಿಂದ ಸಂಜೆ 5 ಗಂಟೆಯ ಒಳಗೆ ಸಂಪರ್ಕಿಸುವಂತೆ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News