ಡಿ.ದೇವರಾಜ ಅರಸು ಅಭಿವೃದ್ಧಿ ನಿಗಮ ಸಾಲ ಯೋಜನೆ ಅರ್ಜಿ ಆಹ್ವಾನ

Update: 2020-01-20 14:33 GMT

ಉಡುಪಿ, ಜ.20: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಹಿಂದುಳಿದ ವರ್ಗಗಳ ಜನರ ಆರ್ಥಿಕ ಅಭಿವೃದ್ಧಿಗಾಗಿ 2019-20ನೇ ಸಾಲಿನಲ್ಲಿ ರಾಷ್ಟ್ರೀಯ ಹಿಂದುಳಿದ ವರ್ಗಗಳ ಹಣಕಾಸು ಮತ್ತು ಅಭಿವೃದ್ಧಿ ನಿಗಮದ ಸಹ ಯೋಗದೊಂದಿಗೆ ಅನುಷ್ಠಾನಗೊಳಿಸುತ್ತಿರುವ ಯೋಜನೆಗಳ ಸೌಲ್ಯ ಪಡೆಯ ಬಯಸುವವರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನಿಗಮದ ಯೋಜನೆಗಳಲ್ಲಿ ಸೌಲ್ಯ ಪಡೆಯಲಿಚ್ಛಿಸುವ ಅರ್ಜಿದಾರರು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ಗೆ ಸೇರಿದವರಾ ಗಿರಬೇಕು. (ವಿಶ್ವಕರ್ಮ ಅದರ ಉಪ ಸಮುದಾಯಗಳನ್ನು ಮತ್ತು ಮತೀಯ ಅಲ್ಪಸಂಖ್ಯಾತರನ್ನು ಹೊರತುಪಡಿಸಿ). ಅರ್ಜಿದಾರರ ಮತ್ತು ಅವರ ಕುಟುಂಬದ ವಾರ್ಷಿಕ ಆದಾಯ 3 ಲಕ್ಷ ರೂ. ಒಳಗಿರಬೇಕು. ಅರ್ಜಿದಾರರು 18 ರಿಂದ 55 ವರ್ಷಗಳ ಮಿತಿಯಲ್ಲಿರಬೇಕು. ಅರ್ಜಿದಾರರು ಆಧಾರ್ ಸಂಖ್ಯೆ ಹೊಂದಿರಬೇಕು ಹಾಗೂ ಐಎಫ್‌ಸಿ ಕೋಡ್ ಹೊಂದಿರುವ ರಾಷ್ಟ್ರೀಕೃತ/ ಗ್ರಾಮೀಣ ಬ್ಯಾಂಕ್‌ಗಳಲ್ಲಿ ಖಾತೆ ಹೊಂದಿರಬೇಕು.

ರಾಷ್ಟ್ರೀಯ ಹಿಂ.ವರ್ಗಗಳ ಹಣಕಾಸು ಮತ್ತು ಅಭಿವೃದ್ಧಿ ನಿಗಮದ ಸಾಲ ಯೋಜನೆಗಳು: ಅವಧಿ ಸಾಲ ಯೋಜನೆಗಳು, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಕಡಿಮೆ ಬಡ್ಡಿದರದಲ್ಲಿ ಶೈಕ್ಷಣಿಕ ಸಾಲ, ನ್ಯೂ ಸ್ವರ್ಣಿಮಾ ಯೋಜನೆ, ಮೈಕ್ರೋಪೈನಾನ್ಸ್ ಸಾಲ ಯೋಜನೆ, ಮಹಿಳಾ ಸಮೃದ್ಧಿ ಯೋಜನೆ, ಚಿಕ್ಕ ಸಾಲ ಯೋಜನೆ.

ಮೇಲಿನ ಯೋಜನೆಗಳ ಸೌಲಭ್ಯ ಪಡೆಯಲಿಚ್ಛಿಸುವ ಹಿಂದುಳಿದ ವರ್ಗಗಳ ಆಸಕ್ತರು ಉಡುಪಿ ಜಿಲ್ಲೆಯ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿ ಅಥವಾ ಆಯಾ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿಗಳ ಕಛೇರಿಯಲ್ಲಿ ಉಚಿತ ಅರ್ಜಿಗಳನ್ನು ಪಡೆಯಬಹುದು ಹಾಗೂ ನಿಗಮದ ವೆಬ್‌ಸೈಟ್-www.karnataka.gov.in/dbcdc-ಮೂಲಕವೂ ಪಡೆಯ ಬಹುದು.

ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ರಜತಾದ್ರಿ, ಮಣಿಪಾಲ, ಉಡುಪಿ ಕಚೇರಿಗೆ ಜ.31ರೊಳಗೆ ಸಲ್ಲಿಸ ಬೇಕು. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್- www.karnataka.gov.in/dbcdc ಮತ್ತು ದೂರವಾಣಿ ಸಂಖ್ಯೆ: 0820-2574882 ಅನ್ನು ಸಂಪರ್ಕಿಸುವಂತೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ವ್ಯವಸ್ಥಾಪಕರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News