​ವಿಧಾನಪರಿಷತ್ ಅರ್ಜಿ ಸಮಿತಿಯಿಂದ ಅರ್ಜಿಗಳ ವಿಚಾರಣೆ

Update: 2020-01-20 15:03 GMT

ಉಡುಪಿ, ಜ.20: ಉಡುಪಿ ಜಿಲ್ಲೆಗೆ ಸಂಬಂಧಿಸಿದಂತೆ ಕರ್ನಾಟಕ ವಿಧಾನ ಪರಿಷತ್‌ನ ಅರ್ಜಿ ಸಮಿತಿಯು ತನ್ನಲ್ಲಿ ದಾಖಲಾಗಿರುವ ಅರ್ಜಿಗಳ ಕುರಿತು ಜ.21 ಮತ್ತು 22ರಂದು ಉಡುಪಿಗೆ ಬಂದು ಸ್ಥಳ ಪರಿಶೀಲನೆ ನಡೆಸಿ, ವಿಚಾರಣೆ ನಡೆಸಲಿದೆ.

ಸಮಿತಿಯು ಜ.21ರಂದು ಬೆಳಗ್ಗೆ 11:30ಕ್ಕೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಈ ಕುರಿತು ಸಭೆಯನ್ನು ನಡೆಸಲಿದೆ. ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದಂತೆ 2018ರಲ್ಲಿ 34 ಹಾಗೂ 74 ಅರ್ಜಿ, ಜಲಸಂಪನ್ಮೂಲ ಇಲಾಖೆಗೆ ಸಂಬಂಧಿಸಿದಂತೆ 2010ರ 75, 2011ರ 22, 2015ರ 12 ಹಾಗೂ 2018ರ 75 ಅರ್ಜಿಗಳು, ಸಣ್ಣ ನೀರಾವರಿ ಇಲಾಖೆಗೆ ಸಂಬಂಧಿಸಿದಂತೆ 2013ರಲ್ಲಿ 44, 2017ರಲ್ಲಿ 95 ಅರ್ಜಿಗಳ ವಿಚಾರಣೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News