ಕೇರಳದಲ್ಲಿ ಎನ್‌ಪಿಆರ್ ಅನುಷ್ಠಾನವಿಲ್ಲ: ಪಿಣರಾಯಿ ವಿಜಯನ್

Update: 2020-01-20 15:44 GMT

ಕೊಚ್ಚಿ, ಜ. 20: ಪ್ರಸ್ತಾಪಿತ ರಾಷ್ಟ್ರೀಯ ಜನಸಂಖ್ಯೆ ನೋಂದಣಿ (ಎನ್‌ಪಿಆರ್) ಯನ್ನು ಅನುಷ್ಠಾನಗೊಳಿಸದೇ ಇರಲು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದ ಕೇರಳ ಸರಕಾರ ನಿರ್ಧರಿಸಿದೆ. ಕೇರಳ ಸರಕಾರ ಇತ್ತೀಚೆಗೆ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಿರ್ಣಯ ಅಂಗೀಕರಿಸಿದ ಹಾಗೂ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಸುಪ್ರೀಂ ಕೋರ್ಟ್‌ನ ಮೆಟ್ಟಿಲೇರಿದ ಬಳಿಕ ಈ ಬೆಳವಣಿಗೆ ನಡೆದಿದೆ.

ರಾಜ್ಯದಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿ ಅನುಷ್ಠಾನಿಸದೇ ಇರಲು ಕೇರಳ ಸಚಿವ ಸಂಪುಟ ಸೋಮವಾರ ನಿರ್ಧರಿಸಿದೆ. ಈ ನಿರ್ಧಾರದ ಬಗ್ಗೆ ಜನಗಣತಿ ನೋಂದಣಿ ಜನರಲ್‌ಗೆ ಮಾಹಿತಿ ನೀಡಲಾಗುವುದು ಹಾಗೂ ಜನಗಣತಿಯನ್ನು ನಿಯಮದ ಪ್ರಕಾರ ಮಾಡಲಾಗುವುದು ಎಂದು ಸರಕಾರ ಹೇಳಿದೆ.

 ಪೌರತ್ವ ತಿದ್ದುಪಡಿ ಕಾಯ್ದೆ, ರಾಷ್ಟ್ರೀಯ ಪೌರತ್ವ ನೋಂದಣಿ ಹಾಗೂ ರಾಷ್ಟ್ರೀಯ ಜನಸಂಖ್ಯಾ ನೋಂದಣಿ ಕುರಿತಂತೆ ಕೇಂದ್ರ ಸರಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ರಾಜ್ಯ ಸರಕಾರ ರಾಷ್ಟ್ರೀಯ ಜನಸಂಖ್ಯಾ ನೋಂದಣಿಯನ್ನು ಅನುಷ್ಠಾನಗೊಳಿಸುವುದಿಲ್ಲ. ಆದರೆ, ಸಂವಿಧಾನ ವೌಲ್ಯಗಳನ್ನು ಎತ್ತಿ ಹಿಡಿಯಲಿದೆ ಎಂದಿದ್ದಾರೆ. ದೇಶದ ಎಲ್ಲ ಕಾನೂನುಗಳು ಸಂವಿಧಾನಕ್ಕೆ ಅನುಗುಣವಾಗಿ ಇರಬೇಕು ಎಂಬುದನ್ನು ನಾವೆಲ್ಲರೂ ಅರ್ಥ ಮಾಡಿಕೊಳ್ಳಬೇಕಾಗದ ಅಗತ್ಯ ಇದೆ. ಒಂದು ವೇಳೆ ಕಾನೂನು ಅಲ್ಟ್ರಾ ವೈರಸ್ ಆದರೆ, ಅದು ನಿಲ್ಲಲಾರದು ಎಂದು ಪಿಣರಾಯಿ ವಿಜಯನ್ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News