ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಆಯುಷ್ಮಾನ್ ಭಾರತ್ ಕಾರ್ಡ್ ವಿತರಣೆ

Update: 2020-01-20 16:29 GMT

ಉಡುಪಿ, ಜ.20: ರಾಜ್ಯ ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಪ್ರಯತ್ನದ ಫಲವಾಗಿ ಗ್ರಾಪಂ ಮಟ್ಟದಲ್ಲಿರುವ ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಕಾರ್ಡ್‌ಗಳ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ.

ಈ ಬಗ್ಗೆ ಪ್ರಧಾನ ಕಾರ್ಯದರ್ಶಿಗಳು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ನೀಡಿದ ಸೂಚನೆಯಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಜಂಟಿ ತೀರ್ಮಾನ ತೆಗೆದುಕೊಂಡು ಗ್ರಾಪಂ ಮಟ್ಟದಲ್ಲಿ ಆಯುಷ್ಮಾನ್ ಭಾರತ್- ಆರೋಗ್ಯ ಕರ್ನಾಟಕ ಕಾರ್ಡ್‌ಗಳನ್ನು ವಿತರಿಸಲು ತೀರ್ಮಾನ ತೆಗೆದುಕೊಳ್ಳಲಾಗಿದೆ.

ಈ ಕಾರ್ಡ್‌ಗಳನ್ನು ಗ್ರಾಪಂಗಳಲ್ಲಿ ವಿತರಿಸುವ ನೋಡಲ್ ಅಧಿಕಾರಿಗಳಾದ ಜಿಲ್ಲಾ ಕುಷ್ಠರೋಗ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಡಾಟಾ ಎಂಟ್ರಿ ಅಪರೇಟರ್‌ಗಳಿಗೆ ತರಬೇತಿಯನ್ನು ನೀಡಲು ಜಿಲ್ಲಾಡಳಿತ ತೀರ್ಮಾನವನ್ನು ತೆಗೆದುಕೊಂಡಿದೆ ಎಂದು ಸಚಿವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News