ಸ್ಟೀಲ್ ಬ್ರಿಡ್ಜ್ ವಿವಾದ: ಮಾಜಿ ಸಿಎಂ‌ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ಕೈಬಿಟ್ಟ ಲೋಕಾಯುಕ್ತ

Update: 2020-01-21 06:02 GMT

ಬೆಂಗಳೂರು, ಜ.21: ಚಾಲುಕ್ಯ ವೃತ್ತದಿಂದ ಹೆಬ್ಬಾಳದವರೆಗೆ ಸ್ಟೀಲ್ ಬ್ರಿಡ್ಜ್ ನಿರ್ಮಿಸುವ ಯೋಜನೆ ವಿಚಾರದಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಲೋಕಾಯುಕ್ತ ಸಂಸ್ಥೆ ಕೈಬಿಟ್ಟಿದೆ.

ಬಿಜೆಪಿಯ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್, ಸ್ಟೀಲ್ ಬ್ರಿಡ್ಜ್ ನಿರ್ಮಿಸುವ ವಿಚಾರದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಈಗಾಗಲೇ ಸ್ಟೀಲ್ ಬ್ರಿಡ್ಜ್ ಯೋಜನೆಯನ್ನು ಸರಕಾರ ಕೈಬಿಟ್ಟಿದೆ. ಅಲ್ಲದೆ, ಭ್ರಷ್ಟಾಚಾರ ನಡೆದಿದೆ ಎಂಬುದಕ್ಕೆ ಯಾವುದೇ ಮಾಹಿತಿ ಸಿಕ್ಕಿಲ್ಲ ಎಂಬ ಹಿನ್ನೆಲೆಯಲ್ಲಿ ಪ್ರಕರಣವನ್ನು ಕೈಬಿಟ್ಟಿದೆ.

ಸಿದ್ದರಾಮಯ್ಯ ಟ್ವೀಟ್: ನನ್ನ ವಿರುದ್ಧ ದಾಖಲಾಗಿದ್ದ  ಪ್ರಕರಣವನ್ನು ಲೋಕಾಯುಕ್ತ ಸಂಸ್ಥೆ ಕೈಬಿಟ್ಟಿದೆ. ಇದರಿಂದ ನಮಗೆ ದೊಡ್ಡ ಗೆಲುವು ಸಿಕ್ಕಿದೆ. ಇದರಲ್ಲಿ ಯಾವುದೇ ಭ್ರಷ್ಟಾಚಾರ ನಡೆದಿಲ್ಲ.

ರಾಜೀವ್ ಚಂದ್ರಶೇಖರ ಟ್ವೀಟ್: ಸಿದ್ದರಾಮಯ್ಯ ನೇತೃತ್ವದ ಸರಕಾರ 10 ಪರ್ಸೆಂಟ್ ಸರಕಾರವಾಗಿತ್ತು. ಎಸಿಬಿ ಸ್ಥಾಪನೆಯಿಂದಾಗಿ. ಲೋಕಾಯುಕ್ತ ಸಂಸ್ಥೆ ಪ್ರಕರಣವನ್ನು ಕೈಬಿಟ್ಟಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News