ಫೆ.28-29ರಂದು ಕಡಬ ತಾಲೂಕು ಪ್ರಥಮ ಸಾಹಿತ್ಯ ಸಮ್ಮೇಳನ
Update: 2020-01-21 13:52 IST
ಅಧ್ಯಕ್ಷರಾಗಿ ನಾರಾಯಣ ಭಟ್ ಆಯ್ಕೆ
ಪುತ್ತೂರು, ಜ.21: ಕಡಬ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಘಟಕದ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನವು ಫೆ.28 ಮತ್ತು 29ರಂದು ರಾಮಕುಂಜ ಪದವಿ ಕಾಲೇಜಿನಲ್ಲಿ ನಡೆಯಲಿದೆ. ಸಮ್ಮೇಳನಾಧ್ಯಕ್ಷರಾಗಿ ಶಿಕ್ಷಕ, ಸಾಹಿತಿ, ಸಾಮಾಜಿಕ ಕಾರ್ಯಕರ್ತ ನಾರಾಯಣ ಭಟ್ ಟಿ. ರಾಮಕುಂಜ ಆಯ್ಕೆಯಾಗಿದ್ದಾರೆ ಎಂದು ದ.ಕ. ಜಿಲ್ಲಾ ಕಸಾಪ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಮತ್ತು ಕಡಬ ತಾಲೂಕು ಕಸಾಪ ಘಟಕದ ಅಧ್ಯಕ್ಷ ಜನಾರ್ದನ ಗೌಡ ಪಣೆಮಜಲು ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.