ಮಂಗಳೂರಿನಲ್ಲಿ ಸ್ಫೋಟಕ ಪತ್ತೆ ಪ್ರಕರಣದ ಬಗ್ಗೆ ಸಿಎಂ ಯಡಿಯೂರಪ್ಪ ಪ್ರತಿಕ್ರಿಯೆ

Update: 2020-01-21 12:26 GMT

ಬೆಂಗಳೂರು, ಜ. 21: ‘ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆಯಾಗಿರುವ ಘಟನೆ ದುರದೃಷ್ಟಕರ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.

ಮಂಗಳವಾರ ಈ ಸಂಬಂಧ ಟ್ವೀಟ್ ಮಾಡಿರುವ ಅವರು, ‘ಈ ಘಟನೆಗೆ ಕಾರಣರಾಗಿರುವ ಶಕ್ತಿಗಳನ್ನು ಮಟ್ಟ ಹಾಕಲಾಗುವುದು. ಭದ್ರತೆಗೆ ಭಂಗ ತರುವ ಯಾವುದೇ ರೀತಿಯ ಚಟುವಟಿಕೆಗಳನ್ನು ಸಹಿಸುವುದಿಲ್ಲ. ನಾಗರಿಕರು ಯಾವುದೇ ಕಾರಣಕ್ಕೂ ಆತಂಕ ಪಡಬೇಕಿಲ್ಲ’ ಎಂದು ಅಭಯ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News