ಜ.30ಕ್ಕೆ ತುಮಕೂರು ಮನಪಾ ಮೇಯರ್-ಉಪಮೇಯರ್ ಚುನಾವಣೆ

Update: 2020-01-21 12:46 GMT

ತುಮಕೂರು, ಜ.21: ತುಮಕೂರು ಮಹಾನಗರಪಾಲಿಕೆ ಮೇಯರ್, ಉಪಮೇಯರ್ ಮತ್ತು ಸ್ಥಾಯಿ ಸಮಿತಿ ಸದಸ್ಯರ ಚುನಾವಣಾ ಪ್ರಕ್ರಿಯೆಯು ಜನವರಿ 30ರಂದು ನಡೆಯಲಿದೆ ಎಂದು ಪಾಲಿಕೆ ಆಯುಕ್ತ ಟಿ.ಭೂಬಾಲನ್ ಅವರು ತಿಳಿಸಿದ್ದಾರೆ.

ಸದರಿ ಚುನಾವಣೆ ಪ್ರಕ್ರಿಯೆಯ ವೇಳಾಪಟ್ಟಿ ವಿವರ ಇಂತಿದೆ. ಜನವರಿ 30 ರಂದು ಬೆಳಗ್ಗೆ 11:30 ಗಂಟೆಯಿಂದ ಸದಸ್ಯರ ಹಾಜರಾತಿ ಪಡೆದ ನಂತರ ಮೇಯರ್ ಸ್ಥಾನದ ಚುನಾವಣೆ ಪ್ರಾರಂಭಿಸಲಾಗುವುದು. ನಂತರ ಉಪಮೇಯರ್ ಸ್ಥಾನದ ಚುನಾವಣೆ ನಂತರ ತೆರಿಗೆ ನಿರ್ಧರಣೆ, ಹಣಕಾಸು ಮತ್ತು ಅಪೀಲುಗಳ ಸ್ಥಾಯಿ ಸಮಿತಿ ಸದಸ್ಯರ ಸ್ಥಾನಕ್ಕೆ ಚುನಾವಣೆ, ನಂತರ ಸಾರ್ವಜನಿಕ ಆರೋಗ್ಯ ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಸದಸ್ಯರ ಸ್ಥಾನಕ್ಕೆ, ಬಳಿಕ ಪಟ್ಟಣ ಯೋಜನೆ ಮತ್ತು ಸುಧಾರಣೆಗಾಗಿ ಸ್ಥಾಯಿ ಸಮಿತಿ ಸದಸ್ಯರ ಸ್ಥಾನಕ್ಕೆ, ಕೊನೆಯದಾಗಿ ಲೆಕ್ಕಪತ್ರ ಸ್ಥಾಯಿ ಸದಸ್ಯರ ಸ್ಥಾನಕ್ಕೆ ಚುನಾವಣೆ ನಡೆಸಲಾಗುವುದು. 

ಚನಾವಣೆಯ ಪ್ರಕ್ರಿಯೆಯಲ್ಲಿ ಸದಸ್ಯರು ಸಲ್ಲಿಸಿದ್ದ ನಾಮಪತ್ರಗಳ ಪರಿಶೀಲನೆ, ನಾಮಪತ್ರಗಳನ್ನು ಹಿಂಪಡೆಯಲು ಕಾಲಾವಕಾಶ, ಅಗತ್ಯವಿದ್ದರೆ ಚುನಾವಣೆ ನಡೆಸಲಾಗುವುದು ಹಾಗೂ ಅಂತಿಮವಾಗಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News