ಉಡುಪಿ: ಮಹಾಯೋಗಿ ವೇಮನ, ಅಂಬಿಗರ ಚೌಡಯ್ಯ ಜಯಂತಿ

Update: 2020-01-21 14:46 GMT

ಉಡುಪಿ, ಜ.21: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಶಿವಯೋಗಿ ಸಿದ್ಧರಾಮೇಶ್ವರ ಮಹಾಯೋಗಿ ವೇಮನ ಹಾಗೂ ಅಂಬಿಗರ ಚೌಡಯ್ಯ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.

ಮಹಾಯೋಗಿ ವೇಮನ ಹಾಗೂ ಅಂಬಿಗರ ಚೌಡಯ್ಯರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಜಿ.ಜಗದೀಶ್ ಪುಷ್ಪಾರ್ಚನೆ ಮಾಡಿದರು. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ವಿಶೇಷ ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಉಡುಪಿ ತಾಲೂಕು ಪಂಚಾಯತ್ ಅಧ್ಯಕ್ಷೆ ನೀತಾ ಗುರುರಾಜ್ ಪೂಜಾರಿ, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರು, ಕುಂದಾಪುರ ಸಹಾಯಕ ಆಯುಕ್ತ ಕೆ.ರಾಜು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಬೆಕ್ಕೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಆರ್.ಶೇಷಪ್ಪಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News