ಕುಂದಾಪುರ: ಬೀದಿನಾಟಕ ಪ್ರದರ್ಶನ

Update: 2020-01-21 15:00 GMT

ಉಡುಪಿ, ಜ.21: ಕರ್ನಾಟಕ ಸರ್ಕಾರ ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಉಡುಪಿ ಜಿಲ್ಲೆ ಇವರ ಜಂಟಿ ಆಶ್ರಯದಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆಯ ಅರಿವು ಮೂಡಿಸುವ ಸಲುವಾಗಿ ಬೀದಿನಾಟಕವನ್ನು ಸೋಮವಾರ ಕುಂದಾಪುರ ತಾಲೂಕಿನ ಪ್ರಮುಖ ಸ್ಥಳಗಳಲ್ಲಿ ಆಯೋಜಿಸಲಾಯಿತು.

ಕಾರ್ಯಕ್ರಮವನ್ನು ಕುಂದಾಪುರ ತಹಶೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿ ತಿಪ್ಪೇಸ್ವಾಮಿ ಉದ್ಘಾಟಿಸಿದರು. ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಯ ಕುರಿತು, ಮಕ್ಕಳಿಗೆ ಕಡ್ಡಾಯ ಶಿಕ್ಷಣವನ್ನು ನೀಡುವ ಕುರಿತು ನಾಟಕ, ನೃತ್ಯ, ಹಾಡಿನ ಮೂಲಕ ಬೀದಿನಾಟಕವನ್ನು ರಾಮನಗರ ಬಹುಜನ್ ಕ್ರಿಯೇಶನ್ಸ್ ತಂಡದಿಂದ ಪ್ರದರ್ಶಿಸಲಾಯಿತು.

ತಶೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿ ತಿಪ್ಪೇಸ್ವಾಮಿ ಉದ್ಘಾಟಿಸಿದರು. ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಯ ಕುರಿತು, ಮಕ್ಕಳಿಗೆ ಕಡ್ಡಾಯ ಶಿಕ್ಷಣವನ್ನು ನೀಡುವ ಕುರಿತು ನಾಟಕ, ನೃತ್ಯ, ಹಾಡಿನ ಮೂಲಕ ಬೀದಿನಾಟಕವನ್ನು ರಾಮನಗರ ಬಹುಜನ್ ಕ್ರಿಯೇಶನ್ಸ್ ತಂಡದಿಂದ ಪ್ರದರ್ಶಿಸಲಾಯಿತು. ಕುಂದಾಪುರ ವೃತ್ತ ಕಾರ್ಮಿಕ ನಿರೀಕ್ಷಕ ಸತ್ಯನಾರಾಯಣ್, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘದ ಯೋಜನಾ ನಿರ್ದೇಶಕಿ ಪೂರ್ಣಿಮಾ ಭಾನುಪ್ರಕಾಶ್ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News