ವಿಚಾರಣೆಗೆ ಹಾಜರಾದ ನಟಿ ರಶ್ಮಿಕಾ ಮಂದಣ್ಣ

Update: 2020-01-21 16:19 GMT

ಮೈಸೂರು,ಜ.21: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಇಂದು ಮೈಸೂರಿನ ನಜರ್‍ಬಾದ್‍ನಲ್ಲಿರುವ ಪ್ರಧಾನ ಆದಾಯ ತೆರಿಗೆ ಆಯುಕ್ತರ ಕಚೇರಿಗೆ ಹಾಜರಾದರು.

ಹೈದರಾಬಾದ್‍ನಲ್ಲಿ ಸಿನಿಮಾವೊಂದರ ಪ್ರಚಾರ ಕಾರ್ಯಕ್ರಮದಲ್ಲಿದ್ದ ರಶ್ಮಿಕಾ ಅವರಿಗೆ ವಿಚಾರಣೆಗೆ ಬರಲು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಸೂಚಿಸಿದ್ದರು. ಅದಕ್ಕಾಗಿ ಅವರು ಹೈದರಬಾದ್‍ನಿಂದ ವಿಮಾನದ ಮೂಲಕ ಮೈಸೂರಿಗೆ ಆಗಮಿಸಿದರು.

ಮೈಸೂರಿನಲ್ಲಿ 9 ಮಂದಿಯೊಂದಿಗೆ 2 ಬ್ಯಾಗ್‍ಗಳು ಮತ್ತು ಒಂದು ಕಿಟ್‍ನಲ್ಲಿ ದಾಖಲಾತಿಗಳನ್ನು ತೆಗೆದುಕೊಂಡು ಕಚೇರಿ ಪ್ರವೇಶಿಸಿದರು. ಇದಕ್ಕೂ ಮುನ್ನ  ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ರಶ್ಮಿಕಾ ಮಂದಣ್ಣ ಅವರ ತಂದೆ ಮದನ್ ಮಂದಣ್ಣ, ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕೆಲವೊಂದು ದಾಖಲೆಗಳನ್ನು ಕೇಳಿದ್ದಾರೆ. ಅವರಿಗೆ ಕೊಡಲು ಬಂದಿದ್ದೇವೆ. ಇದನ್ನು ಬಿಟ್ಟರೆ ಬೇರಿನ್ನೇನು ಗೊತ್ತಿಲ್ಲ ಎಂದು ತಿಳಿಸಿದರು.

ಶುಕ್ರವಾರವಷ್ಟೇ ರಶ್ಮಿಕಾ ಮಂದಣ್ಣ ಅವರ ನಿವಾಸದ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಮಂಗಳವಾರ ವಿಚಾರಣೆಗೆ ಹಾಜರಾಗಬೇಕು ಎಂದು ಸೂಚಿಸಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News