ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಇಟ್ಟಿದ್ದ ಪ್ರಕರಣದ ಆರೋಪಿ ಆದಿತ್ಯ ರಾವ್ ಡಿಜಿಪಿ-ಐಜಿಪಿ ಮುಂದೆ ಶರಣು

Update: 2020-01-22 04:09 GMT

 ಮಂಗಳೂರು, ಜ.22: ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಪತ್ತೆ ಪ್ರಕರಣದ ಆರೋಪಿ ಉಡುಪಿ ಮೂಲದ ಆದಿತ್ಯ ರಾವ್ ಬುಧವಾರ ಬೆಂಗಳೂರಿನಲ್ಲಿ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ಡಿಜಿಪಿ-ಐಜಿಪಿ ನೀಲಮಣಿ ಎನ್. ರಾಜು ಅವರ ಕಚೇರಿಗೆ ಬಂದು ಶರಣಾಗಿದ್ದಾನೆ. ಆದಿತ್ಯ ರಾವ್ ಬಂಧನವನ್ನು ಗೃಹಸಚಿವ ಬಸವರಾಜ ಬೊಮ್ಮಾಯಿ ಖಚಿತಪಡಿಸಿದ್ದಾರೆ.

ಇಂದು ಬೆಳಗ್ಗೆ 8:45ರ ಸುಮಾರಿಗೆ ಆದಿತ್ಯ ರಾವ್ ಪೊಲೀಸರೆದುರು ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಆತನನ್ನು ಹಲಸೂರು ಗೇಟ್ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ.

ಆರೋಪಿ ಆದಿತ್ಯ ರಾವ್ ವಿಮಾನ ನಿಲ್ದಾಣದಲ್ಲಿ ತಾನು  ಸ್ಫೋಟಕ ತುಂಬಿದ ಬ್ಯಾಗ್ ಇಟ್ಟು ಪರಾರಿಯಾಗಿರುವುದಾಗಿ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿರುವುದಾಗಿ ತಿಳಿದು ಬಂದಿದೆ.

ಆರೋಪಿ ಆದಿತ್ಯ ರಾವ್ ನ್ನು ವಶಕ್ಕೆ ತೆಗೆದುಕೊಂಡಿರುವ ಪೊಲೀಸರು ಪ್ರಕರಣದ ತನಿಖೆ ಮುಂದುವರಿಸಿದ್ದಾರೆ.

ಈ ನಡುವೆ ಆರೋಪಿ ಆದಿತ್ಯನನ್ನು ಪೊಲೀಸರು  ಹೆಚ್ಚಿನ ವಿಚಾರಣೆಗೊಳಪಡಿಸಲು  ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ ಎಂದು ತಿಳಿದು ಬಂದಿದೆ.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋಮವಾರ ಸ್ಫೋಟಕವಿದ್ದ ಬ್ಯಾಗ್ ವೊಂದು ಪತ್ತೆಯಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News