ಕೊಡಗು: ಮಹಿಳಾ ಬ್ಲಾಕ್ ಕಾಂಗ್ರೆಸ್‌ಗೆ ನೂತನ ಅಧ್ಯಕ್ಷರ ನೇಮಕ

Update: 2020-01-22 12:21 GMT

ಮಡಿಕೇರಿ, ಜ.22: ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಹಿಳಾ ಘಟಕದ ನೂತನ ಬ್ಲಾಕ್ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಮಡಿಕೇರಿ ಬ್ಲಾಕ್ ಅಧ್ಯಕ್ಷರಾಗಿ ಟಿ.ಕೆ.ಮೀನಾಕ್ಷಿ, ಸೋಮವಾರಪೇಟೆ ಶೀಲಾ ಡಿಸೋಜ, ವಿರಾಜಪೇಟೆ ತೋರೆರ ಪೊನ್ನಕ್ಕಿ ಗಣೇಶ್, ನಾಪೋಕ್ಲು ರಾಜೇಶ್ವರಿ ಹಾಗೂ ಕುಶಾಲನಗರ ಬ್ಲಾಕ್ ಅಧ್ಯಕ್ಷರಾಗಿ ಸುನೀತಾ ಮಂಜುನಾಥ್ ಆಯ್ಕೆಯಾಗಿದ್ದಾರೆ.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಸುರಯ್ಯ ಅಬ್ರಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಮಹಿಳಾ ಕಾಂಗ್ರೆಸ್‌ನ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾಗಿ ಮಿನಾಜ್ ಪ್ರವೀಣ್, ಗಾಯತ್ರಿ ನರಸಿಂಹ, ಕಾರ್ಯದರ್ಶಿಗಳಾಗಿ ಉದಯ ಚಂದ್ರಿಕಾ, ಝುಲೈಕಾಬಿ ಹಾಗೂ ನಗರಾಧ್ಯಕ್ಷರಾಗಿ ಫ್ಯಾನ್ಸಿ ಪಾರ್ವತಿ ಆಯ್ಕೆಯಾಗಿದ್ದಾರೆ.

ಪ್ರಮುಖರಾದ ಪ್ರೇಮ ಕೃಷ್ಣಪ್ಪ, ಮುಮ್ತಾಝ್ ಬೇಗಂ, ಸಿಂಧೂ ಹಾಗೂ ಮಂಜುಳಾ ಅವರನ್ನು ಜಿಲ್ಲಾ ಸಮಿತಿಗೆ ನೇಮಕ ಮಾಡಲಾಯಿತು.

ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಕೆ.ಮಂಜುನಾಥ್, ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಗೊಳಿಸಲು ಮಹಿಳೆಯರು ಪ್ರಧಾನ ಪಾತ್ರ ವಹಿಸಬೇಕು. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಮಹಿಳಾ ಕಾಂಗ್ರೆಸ್ಸಿಗರಿಗೆ ಆದರ್ಶವಾಗಬೇಕು ಎಂದರು.

ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಸುರಯ್ಯ ಅಬ್ರಾರ್ ಮಾತನಾಡಿ, ಮಹಿಳಾ ಬ್ಲಾಕ್ ಕಾಂಗ್ರೆಸ್‌ನ ನೂತನ ಅಧ್ಯಕ್ಷರುಗಳು ಬೂತ್ ಮಟ್ಟದಿಂದಲೇ ಪಕ್ಷದ ಬಲವರ್ಧನೆಗೆ ಶ್ರಮಿಸಬೇಕೆಂದು ಕರೆ ನೀಡಿದರು.

ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ವೀಣಾ ಅಚ್ಚಯ್ಯ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಪಿ.ಚಂದ್ರಕಲಾ, ಸದಸ್ಯ ಟಿ.ಪಿ.ರಮೇಶ್, ಜಿಲ್ಲಾ ವಕ್ತಾರ ಟಿ.ಇ.ಸುರೇಶ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಪ್ರಮುಖರಾದ ಪ್ರೇಮಾ ಕೃಷ್ಣಪ್ಪ ಪ್ರಾರ್ಥಿಸಿದರು. ಮಿನಾಜ್ ಪ್ರವೀಣ್ ಸ್ವಾಗತಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News