ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ಆದಿತ್ಯ ರಾವ್ ಭಯೋತ್ಪಾದಕ: ಕೋಟ ಶ್ರೀನಿವಾಸ ಪೂಜಾರಿ

Update: 2020-01-22 16:17 GMT

ಚಿಕ್ಕಬಳ್ಳಾಪುರ, ಜ.22: ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ಆದಿತ್ಯ ರಾವ್ ಒಬ್ಬ ಭಯೋತ್ಪಾದಕನಾಗಿದ್ದು, ಸರಕಾರ ಆತನ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಚಿಕ್ಕಬಳ್ಳಾಪುರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸರಿಗೆ ಶರಣಾಗಿರುವ ಆರೋಪಿ ಆದಿತ್ಯ ರಾವ್ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರ ಜಾತಿ, ಧರ್ಮ ನೋಡಲ್ಲ. ಆತ ಒಬ್ಬ ಭಯೋತ್ಪಾದಕ ಎಂದ ಅವರು, ವಿಮಾನ ನಿಲ್ದಾಣದಲ್ಲಿ ಇಟ್ಟ ಬಾಂಬ್ ಅನ್ನು ಪೊಲೀಸರು ನಿಷ್ಕ್ರಿಯಗೊಳಿಸಿದ್ದಾರೆ. ಇಲ್ಲದಿದ್ದರೆ ಸಾಕಷ್ಟು ಅನಾಹುತ ಆಗುತ್ತಿತ್ತು ಎಂದು ಆತಂಕ ವ್ಯಕ್ತಪಡಿಸಿದರು.

ಬಾಂಬ್ ಇಟ್ಟವರನ್ನು ಮುಗ್ದರ ಸಾಲಿಗೆ ಹೋಲಿಕೆ ಮಾಡುವುದು ಸರಿಯಲ್ಲ. ರಾಜ್ಯ ಸರಕಾರ ಬದಲಾಗಿರಬಹುದು. ಆದರೆ ಆಡಳಿತ ವರ್ಗ ಬದಲಾಗಿಲ್ಲ. ಇಂತಹ ಕೃತ್ಯಗಳನ್ನು ಸರ್ಕಾರ ಗಂಭೀರವಾಗಿ ಪರಿಣಿಸಲಿದೆ ಎಂದು ತಿಳಿಸಿದ ಅವರು, ಮಂಗಳೂರಿನಲ್ಲಿ ನಡೆಯುತ್ತಿರುವ ದುಷ್ಕೃತ್ಯಗಳ ಹಿಂದೆ ಹೊರ ರಾಜ್ಯಗಳ ಕೈವಾಡ ಇರುವ ಶಂಕೆ ಇದೆ. ಈ ಬಗ್ಗೆ ಪೊಲೀಸರು ಎಲ್ಲ ದೃಷ್ಟಿಕೋನದಿಂದ ತನಿಖೆ ನಡೆಸುತ್ತಿದ್ದಾರೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News