×
Ad

ಜ.24ರಂದು ಪೌರತ್ವ ಕಾಯ್ದೆ ವಿರೋಧಿಸಿ ಪಂಜಿನ ಮೆರವಣಿಗೆ, ಸಭೆ

Update: 2020-01-22 22:14 IST

ಉಡುಪಿ, ಜ.22: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ)ದ ಉಡುಪಿ ಜಿಲ್ಲಾ ಸಮಿತಿಯ ವತಿಯಿಂದ ಸಿಎಎ, ಎನ್‌ಆರ್‌ಸಿ ಹಾಗೂ ಎನ್‌ಪಿಆರ್‌ನ್ನು ವಿರೋಧಿಸಿ ಪಂಜಿನ ಮೆರವಣಿಗೆ ಹಾಗೂ ಬಹಿರಂಗ ಸಭೆ ಜ.24ರಂದು ಉಡುಪಿಯ ಅಜ್ಜರಕಾಡಿನಲ್ಲಿರುವ ಹುತಾತ್ಮರ ಸ್ಮಾರಕದಲ್ಲಿ ಸಂಜೆ 6 ಗಂಟೆಗೆ ನಡೆಯಲಿದೆ.

ಸಭೆಯಲ್ಲಿ ಹಿರಿಯ ಚಿಂತಕರಾದ ಜಿ.ರಾಜಶೇಖರ್, ಪ್ರೊ.ಫಣಿರಾಜ್, ಪತ್ರಕರ್ತರಾದ ಹರ್ಷಕುಮಾರ್ ಕುಗ್ವೆ, ಶಶಿಧರ ಹೆಮ್ಮಾಡಿ, ಜಿಲ್ಲಾ ಪ್ರಧಾನ ಸಂಚಾಲಕ ಸುಂದರ ಮಾಸ್ತರ್, ವಂ. ವಿಲಿಯಂ ಮಾರ್ಟಿಸ್ ಹಾಗೂ ಜಿಲ್ಲಾ ಮುಸ್ಲಿಂ ಒಕ್ಕೂಟದ ಯಾಸಿನ್ ಮಲ್ಪೆ ಉಪಸ್ಥಿತರಿರುವರು.

ಸಂವಿಧಾನ ವಿರೋಧಿ, ಪ್ರಜಾಪ್ರಭುತ್ವ ವಿರೋಧಿ, ಮಾನವೀಯತೆಯ ವಿರೋಧಿಯಾದ ಸಿಎಎ, ಎನ್‌ಆರ್‌ಪಿ, ಎನ್‌ಪಿಆರ್ ಎನ್ನುವ ಕರಾಳ ಶಾಸನಗಳನ್ನು ವಿರೋಧಿಸಿ ದೇಶವನ್ನು ರಕ್ಷಿಸಲು ಜನತೆ ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸುವಂತೆ ದಸಂಸ ಪ್ರಕಟಣೆಯಲ್ಲಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News