ಜಾಮಿಯಾ ಹಿಂಸಾಚಾರ: ಮಾ.16ರೊಳಗೆ ವರದಿ ಸಲ್ಲಿಸಲು ಪೊಲೀಸರಿಗೆ ಕೋರ್ಟ್ ನಿರ್ದೇಶ

Update: 2020-01-22 17:08 GMT

ಹೊಸದಿಲ್ಲಿ,ಜ.22: ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿವಿಯಲ್ಲಿ ಡಿ.15ರಂದು ನಡೆದಿದ್ದ ಪೊಲೀಸ್ ಹಿಂಸಾಚಾರದ ಕುರಿತು ಕೈಗೊಳ್ಳಲಾಗಿರುವ ಕ್ರಮದ ಬಗ್ಗೆ ಮಾ.16ರೊಳಗೆ ತನಗೆ ವರದಿಯನ್ನು ಸಲ್ಲಿಸುವಂತೆ ದಿಲ್ಲಿಯ ಮಹಾನಗರ ನ್ಯಾಯಾಲಯವು ಬುಧವಾರ ದಿಲ್ಲಿ ಪೊಲೀಸರಿಗೆ ನಿರ್ದೇಶ ನೀಡಿದೆ. ಪೊಲೀಸರ ವಿರುದ್ಧ ಎಫ್‌ಐಆರ್ ದಾಖಲಿಸಲು ವಿವಿ ಅಧಿಕಾರಿಗಳು ಕೋರಿಕೊಂಡ ಬಳಿಕ ನ್ಯಾಯಾಲಯವು ಈ ನಿರ್ದೇಶವನ್ನು ಹೊರಡಿಸಿತು.

ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳದ್ದನ್ನು ಪ್ರತಿಭಟಿಸಿ ಜ.13ರಂದು ಕುಲಪತಿ ನಜ್ಮಾ ಅಖ್ತರ್ ಅವರ ಕಚೇರಿಗೆ ಮುತ್ತಿಗೆ ಹಾಕಿದ್ದ ನೂರಾರು ಜಾಮಿಯಾ ವಿದ್ಯಾರ್ಥಿಗಳು ಪೊಲೀಸರ ವಿರುದ್ಧ ಎಫ್‌ಐಆರ್ ದಾಖಲಿಸಲು ಆಗ್ರಹಿಸಿದ್ದರು. ವಿದ್ಯಾರ್ಥಿಗಳ ಕಳವಳಗಳನ್ನು ನಿವಾರಿಸಲು ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ವಿವಿ ಭರವಸೆ ನೀಡಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News