ರಾಜ್ಯಮಟ್ಟದ ಪ್ರಶಸ್ತಿಗೆ ಉಡುಪಿ ಜಿಲ್ಲಾಧಿಕಾರಿ ಆಯ್ಕೆ
Update: 2020-01-22 23:33 IST
ಉಡುಪಿ, ಜ. 22: ಕರ್ನಾಟಕ ರಾಜ್ಯ ಲೋಕಸಭಾ ಚುನಾವಣೆ 2019 ಹಾಗೂ ವಿಧಾನಸಭಾ ಉಪಚುನಾವಣೆ 2019ರಲ್ಲಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿರುವುದಕ್ಕಾಗಿ ರಾಜ್ಯ ಮಟ್ಟದ ಪ್ರಶಸ್ತಿಗೆ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್‌ರನ್ನು ಆಯ್ಕೆ ಮಾಡಲಾಗಿದೆ.
ಜ. 25ರಂದು ಬೆಳಗ್ಗೆ 10ಕ್ಕೆ ಬೆಂಗಳೂರಿನ ಪುರಭವನದಲ್ಲಿ ನಡೆಯುವ ರಾಜ್ಯ ಮಟ್ಟದ ರಾಷ್ಟ್ರೀಯ ಮತದಾನ ದಿನಾಚರಣೆ ಕಾರ್ಯಕ್ರಮದಲ್ಲಿ ರಾಜ್ಯಪಾಲರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.