ನ.3 ರಿಂದ 5ರವರೆಗೆ 'ಇನ್ವೆಸ್ಟ್ ಕರ್ನಾಟಕ' ಸಮಾವೇಶ: ದಾವೋಸ್‌ನಲ್ಲಿ ಸಿಎಂ ಯಡಿಯೂರಪ್ಪ ಘೋಷಣೆ

Update: 2020-01-23 12:56 GMT

ದಾವೋಸ್, ಜ.23: ಜಾಗತಿಕ ಹೂಡಿಕೆದಾರರ ಶೃಂಗಸಭೆ 2020(ಆವಿಷ್ಕಾರ ಈಗ ಅಭಿವೃದ್ಧಿ ನಿರಂತರ) ಕರ್ಟನ್ ರೈಸರ್ ಅನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದಾವೋಸ್‌ನಲ್ಲಿ ಬುಧವಾರ ರಾತ್ರಿ ನೆರವೇರಿಸಿದರು.

ಈ ಜಾಗತಿಕ ಹೂಡಿಕೆದಾರರ ಸಮಾವೇಶವು ನವೆಂಬರ್ 3 ರಿಂದ 5 ರವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ ಎಂದು ಅಧಿಕೃತ ದಿನಾಂಕವನ್ನು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಘೋಷಿಸಿದರು. ಕರ್ಟನ್ ರೈಸರ್ ಕಾರ್ಯಕ್ರಮದಲ್ಲಿ 100ಕ್ಕೂ ಹೆಚ್ಚು ಪ್ರಮುಖ ಕೈಗಾರಿಕೋದ್ಯಮಿಗಳು, ಉದ್ಯಮಿಗಳು ಮತ್ತು ಕಂಪನಿ ಪ್ರತಿನಿಧಿಗಳು ಭಾಗವಹಿಸಿದ್ದರು. ಈ ವೇಳೆ ರಾಜ್ಯದಲ್ಲಿ ಹೂಡಿಕೆಗೆ ಇರುವ ಅವಕಾಶಗಳನ್ನು ಪ್ರದರ್ಶಿಸಲಾಯಿತು.

ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, ಜಾಗತಿಕ ವ್ಯಾಪಾರ ಮುಖಂಡರನ್ನು ಶೃಂಗಸಭೆಯಲ್ಲಿ ಭಾಗವಹಿಸಲು ಆಹ್ವಾನಿಸಿದರು. ಕಾರ್ಯಕ್ರಮದಲ್ಲಿ ಭಾರತ ಸರಕಾರದ ಕೇಂದ್ರ ರೈಲ್ವೆ ಮತ್ತು ವಾಣಿಜ್ಯ ಸಚಿವ ಪಿಯೂಷ್ ಗೋಯಲ್, ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣ ರೆಡ್ಡಿ, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತಾ, ಮುಖ್ಯಮಂತ್ರಿಯ ಕಾರ್ಯದರ್ಶಿ ಸೆಲ್ವಕುಮಾರ್, ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News