ಪಿಪಿಸಿ: ಬರವಣಿಗೆ ಕೌಶಲ ಕುರಿತ ಕಾರ್ಯಾಗಾರ

Update: 2020-01-23 14:42 GMT

ಉಡುಪಿ, ಜ.23: ಪೂರ್ಣಪ್ರಜ್ಞ ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಘಟಕದ ಮಾರ್ಗದರ್ಶನದಲ್ಲಿ ಕನ್ನಡ ವಿಭಾಗ ಆಯೋಜಿಸಿದ ಮಂಗಳೂರು ವಿ.ವಿ. ಮಟ್ಟದ ಅಂದದ ಬರವಣಿಗೆಗೆ ಅಗತ್ಯದ ಕೌಶಲ ಎಂಬ ವಿಷಯದ ಕುರಿತ ಕಾರ್ಯಾಗಾರ ವನ್ನು ಕಾಲೇಜಿನ ಗೌರವ ಕಾರ್ಯದರ್ಶಿ ಡಾ.ಜಿ.ಎಸ್.ಚಂದ್ರಶೇಖರ್ ಉದ್ಘಾಟಿಸಿದರು.

ಇಂದು ಎಲ್ಲಾ ರಂಗಗಳಲ್ಲೂ ಕೌಶಲಕ್ಕೆ ವಿಶೇಷ ಮಹತ್ವ ಬಂದಿದೆ. ವಿದ್ಯಾರ್ಥಿ ಗಳು ಪಠ್ಯದೊಂದಿಗೆ ಇಂಥ ಕೌಶಲಗಳನ್ನು ಅಳವಡಿಸಿಕೊಳ್ಳಬೇಕು. ಈ ಕಾರ್ಯಾಗಾರದಿಂದ ವಿದ್ಯಾರ್ಥಿಗಳ ಬರವಣಿಗೆಯ ಕೌಶಲ ವೃದ್ಧಿಸಲಿ ಎಂದು ಅವರು ತಮ್ಮ ಉದ್ಘಾಟನಾ ಭಾಷಣದಲ್ಲಿ ತಿಳಿಸಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಶ್ರೇಷ್ಠ ಲೇಖಕ ಪ್ರಶಸ್ತಿ ಪುರಸ್ಕೃತ ಮುನಿಯಾಲು ಗಣೇಶ್ ಶೆಣೈ ಆಗಮಿಸಿದ್ದರು. ಪ್ರಾಂಶುಪಾಲ ಡಾ.ರಾಘವೇಂದ್ರ ಎ.ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಉಪಪ್ರಾಂಶುಪಾಲ ಹಾಗೂ ಆಂತರಿಕ ಗುಣಮಟ್ಟ ಖಾತರಿ ಘಟಕದ ಸಂಯೋಜಕ ಡಾ. ಪ್ರಕಾಶ್ ರಾವ್ ಉಪಸ್ಥಿತರಿದ್ದರು.

ಮಂಗಳೂರು ವಿವಿ 2018-19ನೇ ಸಾಲಿನಲ್ಲಿ ನಡೆಸಿದ ಪದವಿ ಪರೀಕ್ಷೆಯಲ್ಲಿ ಕನ್ನಡದಲ್ಲಿ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳನ್ನು ಇದೇ ಸಂದರ್ಭದಲ್ಲಿ ಗೌರವಿಸಲಾಯಿತು. ಅಧಿಕ ಅಂಕ ಪಡೆದ ವಿದ್ಯಾರ್ಥಿಗಳ ವಿವರಗಳನ್ನು ಉಪನ್ಯಾಸಕಿ ಡಾ.ಪ್ರಜ್ಞ ಮಾರ್ಪಳ್ಳಿ ವಾಚಿಸಿದರು.

ಕನ್ನಡ ವಿಭಾಗದ ಮುಖ್ಯಸ್ಥ ಡಾ.ಶ್ರೀಕಾಂತ್ ಸಿದ್ದಾಪುರ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಕನ್ನಡ ಉಪನ್ಯಾಸಕ ಮಂಜುನಾಥ ಕರಬ ವಂದಿಸಿ, ಉಪನ್ಯಾಸಕ ಶಿವಕುಮಾರ್ ಬಿ.ಎ. ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News