ಕುಂದಾಪುರ: ಅಂಗನವಾಡಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಭೇಟಿ
Update: 2020-01-23 20:30 IST
ಉಡುಪಿ, ಜ.23: ಕುಂದಾಪುರ ತಾಲೂಕು ಹೊಂಬಾಡಿ-ಮೊಂಬಾಡಿ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಜಿ. ಜಗದೀಶ್ ಗುರುವಾರ ಅನಿರೀಕ್ಷಿತ ಭೇಟಿ ನೀಡಿ, ಅಂಗನವಾಡಿಯ ಸ್ವಚ್ಛತೆ, ಆಹಾರದ ಗುಣಮಟ್ಟಗಳ ಪರಿಶೀಲನೆ ನಡೆಸಿದರು.
ಜಿಲ್ಲಾ ಮಟ್ಟದ ಅಧಿಕಾರಿಗಳು ಕೆಲವು ಸಂಸ್ಥೆಗಳಿಗೆ ಹಠಾತ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸುವ ಕಾರ್ಯಕ್ರಮದಡಿ ಇಂದು ಜಿಲ್ಲಾಧಿಕಾರಿ ಗಳು ಈ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿದ್ದರು.
ಭೇಟಿಯ ವೇಳೆ ಮಕ್ಕಳೊಂದಿಗೆ ಮಕ್ಕಳಾಗಿ ಬೆರೆತು, ಅವರೊಂದಿಗೆ ಒಡನಾಡಿದ ಜಿ.ಜಗದೀಶ್, ಮಕ್ಕಳೊಂದಿಗೆ ುಳಿತು ಅವರೊಂದಿಗೆ ಸಂಭಾಷಿಸಿದರು.