ಜಮ್ಮುಕಾಶ್ಮೀರ ವಿವಾದದಲ್ಲಿ ಮೂರನೆಯವರಿಗೆ ಪಾತ್ರವಿಲ್ಲ: ಭಾರತದ ಸ್ಪಷ್ಟನೆ

Update: 2020-01-23 15:18 GMT
ಫೈಲ್ ಚಿತ್ರ

ಹೊಸದಿಲ್ಲಿ,ಜ.23: ಜಮ್ಮುಕಾಶ್ಮೀರ ವಿವಾದವನ್ನು ಭಾರತ ಹಾಗೂ ಪಾಕಿಸ್ತಾನ ದ್ವಿಪಕ್ಷೀವಾಗಿ ಬಗೆಹರಿಸಬೇಕಾಗಿದೆ. ಅದರಲ್ಲಿ ತೃತೀಯ ಪಕ್ಷಕ್ಕೆ ಯಾವುದೇ ರೀತಿಯ ಪಾತ್ರವಿರುವುದಿಲ್ಲ ಎಂದು ಭಾರತ ಗುರುವಾರ ಸ್ಪಷ್ಟಪಡಿಸಿದೆ. ಕಾಶ್ಮೀರ ವಿವಾದವನ್ನು ಬಗೆಹರಿಸುವಲ್ಲಿ ನೆರವು ನೀಡಲು ಸಿದ್ಧವೆಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕೊಡುಗೆಗೆ ವಿದೇಶಾಂಗ ವ್ಯವಹಾರ ಸಚಿವಾಲಯ ಹೀಗೆ ಪ್ರತಿಕ್ರಿಯಿಸಿದೆ.

  ಕಾಶ್ಮೀರದ ವಿಷಯದಲ್ಲಿ ಭಾರತದ ನಿಲುವು ಸ್ಪಷ್ಟ ಹಾಗೂ ಸ್ಥಿರವಾಗಿದೆ. ಆ ವಿವಾದವನ್ನು ಭಾರತ ಮತ್ತು ಪಾಕಿಸ್ತಾನ ದ್ವಿಪಕ್ಷೀಯವಾಗಿ ಬಗೆಹರಿಸಬೇಕಾಗಿದೆ ಹಾಗೂ ಈ ಕುರಿತಾದ ಮಾತುಕತೆಗೆ ಬೇಕಾದ ವಾತಾವರಣವನ್ನು ಸೃಷ್ಟಿಸುವ ಹೊಣೆಗಾರಿಕೆ  ಇಸ್ಲಾಮಾಬಾದ್‌ಮೇಲಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಹೇಳಿದ್ದಾರೆ.

 ಡಾವೊಸ್‌ನಲ್ಲಿ ಮಂಗಳವಾರ ನಡೆದ ವಿಶ್ವ ಆರ್ಥಿಕ ವೇದಿಕೆ ಶೃಂಗಸಭೆಯ ಸಂದರ್ಭದಲ್ಲಿ ಡೊನಾಲ್ಡ್ ಟ್ರಂಪ್ ಅವರು ಪಾಕ್ ಪ್ರಧಾನಿ ಇಮ್ರಾನ್‌ಖಾನ್ ಜೊತೆ ಸುದ್ದಿಗಾರರನ್ನುದ್ದೇಶಿಸಿ ಮಾತನಾಡುತ್ತಾ, ಕಾಶ್ಮೀರದ ಬೆಳವಣಿಗೆಗಳನ್ನು ಅಮೆರಿಕವು ಅತ್ಯಂತ ನಿಕಟವಾಗಿ ಗಮನಿಸುತ್ತಿದೆ ಎಂದು ಹೇಳಿದ್ದರು. ಈ ವಿಷಯವನ್ನು ಬಗೆಹರಿಸುವ ನಿಟ್ಟಿನಲ್ಲಿ ನೆರವಾಗಲು ತಾನು ಸಿದ್ಧವಿರುವುದಾಗಿ ಅವರು ಕೊಡುಗೆ ನೀಡಿದ್ದರು.

ಕಾಶ್ಮೀರದ ಕುರಿತಾಗಿ ಭಯಭೀತ ಸನ್ನಿವೇಶವನ್ನು ಸೃಷ್ಟಿಸುವ ಪಾಕಿಸ್ತಾನದ ಪ್ರಯತ್ನ ವಿಫಲವಾಗಿದೆ. ಪಾಕಿಸ್ತಾನದ ದ್ವಂದ್ವ ನೀತಿಯನ್ನು ಜಾಗತಿಕ ಸಮುದಾಯಕ್ಕೆ ಅರಿವಾಗಿದೆಯೆಂದು ಎಂದು ರವೀಶ್‌ಕುಮಾರ್ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News