ಜ. 25: ಬಂಗ್ರ ಕೂಳೂರಿನಲ್ಲಿ ಹೊನಲು ಬೆಳಕಿನ ರಾಮ- ಲಕ್ಷ್ಮಣ ಜೋಡುಕರೆ ‘ಮಂಗಳೂರು ಕಂಬಳ ’

Update: 2020-01-23 16:38 GMT

ಮಂಗಳೂರು, ಜ. 23: ನಗರದ ರಾಷ್ಟ್ರೀಯ ಹೆದ್ದಾರಿ 66 ಹಾದು ಹೋಗುವ ಬಂಗ್ರ ಕೂಳೂರಿನ ಗೋಲ್ಡ್ ಪಿಂಚ್ ಸಿಟಿ ಮೈದಾನದಲ್ಲಿ ನಿರ್ಮಿಸಲಾದ ಜೋಡು ಕರೆಯಲ್ಲಿ ಮಂಗಳೂರು ಕಂಬಳ ಜ. 25ರಂದು ಬಂಗ್ರ ನಡೆಯಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ ಕ್ಯಾಪ್ಟನ್ ಬೃಜೇಶ್ ಚೌಟ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 66ರ ಬಳಿ ಇರುವ ಬಂಗ್ರ ಕೂಳೂರಿನ ಗೋಲ್ಡ್ ಪಿಂಚ್ ಮಯದಾನದಲ್ಲಿ ಜ. 25ರಂದು ಬೆಳಗ್ಗೆ 9.30ಕ್ಕೆ ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಧ್ಯಕ್ಷ ಕೆ.ಚಿತ್ತರಂಜನ್ ಕಂಬಳ ಉದ್ಘಾಟಿಸಲಿದ್ದು, ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಜೆ ಆರು ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಕೇಂದ್ರ ಸಚಿವ  ಡಿ.ವಿ.ಸದಾನಂದ ಗೌಡ ಭಾಗವಹಿಸಲಿದ್ದಾರೆ.

ಮಂಗಳೂರು ಕಂಬಳ ಸಮಿತಿ ಗೌರವಾಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಜ. 26ರಂದು ಬೆಳಗ್ಗೆ 8 ಗಂಟೆಗೆ ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಅಧ್ಯಕ್ಷತೆಯಲ್ಲಿ ಬಹುಮಾನ ವಿತರಣೆ ನಡೆಯಲಿದೆ ಎಂದು ಬೃಜೇಶ್ ಚೌಟ ತಿಳಿಸಿದ್ದಾರೆ.

ಶಾಸಕ ಉಮಾನಾಥ ಕೋಟ್ಯಾನ್, ಗುಣಪಾಲ ಕಡಂಬ, ವಿಜಯ ಕುಮಾರ್ ಕಂಗಿನಮನೆ, ಸತೀಶ್ ಕುಂಪಲ, ಸುರೆಶ್ ಆಳ್ವ, ಮಂಗಳೂರು ಕಂಬಳ ಸಮಿತಿ ಕಾರ್ಯಾಧ್ಯಕ್ಷ ಉಳ್ಳಾಲ್ ನಂದನ್ ಮಲ್ಯ, ಪ್ರಧಾನ ಕಾರ್ಯದರ್ಶಿ ಸುಜಿತ್ ಪ್ರತಾಪ್, ಸಂಚಾಲಕರಾದ ಕಿಶೋರ್ ಕುಮಾರ್ ಪುತ್ತೂರು, ಸಾಂತ್ಯಗುತ್ತು ಸಚಿನ್ ಶೆಟ್ಟಿ,ಉಪಾಧ್ಯಕ್ಷರಾದ ಲೋಕೇಶ್ ಶೆಟ್ಟಿ ಕೊಡೆತ್ತೂರು, ಸಂಜಯ್ ಪ್ರಭು, ಬಿ.ನವೀನ್ ಪೂಜಾರಿ ಕೋಶಾಧಿಕಾರಿ ತಲಪಾಡಿ ದೊಡ್ಡಮನೆ ಪ್ರೀತಂ ರೈ ಮೊದಲಾದವರು ಸುದ್ದಿಗೋಷ್ಠಿ ಯಲ್ಲಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News