ಅತ್ಯಾಚಾರ ಪ್ರಕರಣದ ಆರೋಪಿಗೆ ಸಂಸದನಾಗಿ ಪ್ರಮಾಣವಚನ ಸ್ವೀಕರಿಸಲು ಪರೋಲ್ ನೀಡಿದ ಹೈಕೋರ್ಟ್

Update: 2020-01-23 17:51 GMT

ಅಲಹಾಬಾದ್,ಜ.23: ಕಳೆದ ಲೋಕಸಭಾ ಚುನಾವಣೆಯಲ್ಲಿ ಉತ್ತರಪ್ರದೇಶದ ಘೋಸಿ ಕ್ಷೇತ್ರದಿಂದ ಬಿಎಸ್ಪಿ ಅಭ್ಯರ್ಥಿಯಾಗಿ ಜಯಗಳಿಸಿದ್ದ ಅತುಲ್ ರಾಯ್‌ಗೆ ಲೋಕಸಭಾ ಸದಸ್ಯನಾಗಿ ಪ್ರಮಾಣವಚನ ಸ್ವೀಕರಿಸಲು ಅಲಹಾಬಾದ್ ಹೈಕೋರ್ಟ್ ಗುರುವಾರ ಪರೋಲ್ ನೀಡಿದೆ.

ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಅತುಲ್ ರಾಯ್ ಬಂಧನದಲ್ಲಿದ್ದಾನೆ. ಹೀಗಾಗಿ ಅವರಿಗೆ ಲೋಕಸಭಾ ಸದಸ್ಯನಾಗಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಈ ಹಿಂದೆ ಜಾಮೀನು ಕೋರಿ ಆತ ಸಲ್ಲಿಸಿದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿತ್ತು.

 ಆರೋಪಿ ರಾಯ್‌ಗೆ ಕೇವಲ ಎರಡು ದಿನಗಳ ಪರೋಲ್ ನೀಡಲಾಗಿದೆ. ಜನವರಿ 29ರಂದು ಪೊಲೀಸ್ ಕಸ್ಟಡಿಯಲ್ಲಿ ಹೊಸದಿಲ್ಲಿಗೆ ತೆರಳಲಿದ್ದಾನೆ. ಸಂಸತ್ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಅವರನ್ನು ಪೊಲೀಸರು ತಮ್ಮ ವಶಕ್ಕೆ ತೆಗೆದುಕೊಳ್ಳಬೇಕೆಂದು ನ್ಯಾಯಮೂರ್ತಿ ರಮೇಶ್ ಸಿನ್ಹಾ ಆದೇಶದಲ್ಲಿ ತಿಳಿಸಿದ್ದಾರೆ.

ಜಾಮೀನು ಕೋರಿ ಅತುಲ್ ರಾಯ್ ಎರಡನೆ ಸಲ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ನ್ಯಾಯಾಲಯದ ವಿಚಾರಣೆಗೆ ಕೈಗೆತ್ತಿಕೊಂಡಿದೆ. ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಅತುಲ್ ರಾಯ್ ವಿರುದ್ಧ ಕಳೆದ ವರ್ಷದ ಮೇ 1ರಂದು ವಾರಣಾಸಿಯ ಲಾಂಕಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಆನಂತರ ಆತನನ್ನು ಬಂಧಿಸಿ, ಜೈಲಿಗೆ ಕಳುಹಿಸಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News