ಆದಿತ್ಯರಾವ್ ನ ಹಿಂದಿರುವ ವ್ಯವಸ್ಥಿತ ಷಡ್ಯಂತ್ರವನ್ನು ಬಹಿರಂಗಪಡಿಸಬೇಕು : ಅಶ್ರಫ್ ಮಾಚಾರ್

Update: 2020-01-23 18:01 GMT

ಮಂಗಳೂರು : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮುಲ್ಕಿ ಮೂಡುಬಿದಿರೆ ವಿಧಾನ ಸಭಾ ಕ್ಷೇತ್ರದ ವತಿಯಿಂದ ಬಜ್ಪೆ ಕೆಂಜಾರು ವಿಮಾನ ನಿಲ್ದಾಣದ ಹತ್ತಿರ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದ ಬಾಂಬ್ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯಲ್ಲಿ ಮುಖ್ಯ ಭಾಷಣ ಮಾಡಿದ ಎಸ್ಡಿಪಿಐ ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್ ಇದು ಕೇವಲ ಒಂದು ವ್ಯಕ್ತಿಯಿಂದ ನಡೆದ ಸಂಚು ಅಲ್ಲ ಬದಲಾಗಿ ಆತನ ಹಿಂದೆ ಒಂದು ವ್ಯವಸ್ಥಿತ ಷಡ್ಯಂತ್ರ ಅಡಗಿದೆ ಅದನ್ನು ಬಹಿರಂಗಪಡಿಸಬೇಕು ಎಂದು ಹೇಳಿದರು.

ಮಾತ್ರವಲ್ಲದೆ ಬಾಂಬ್ ಇಟ್ಟ ವ್ಯಕ್ತಿ ಆದಿತ್ಯರಾವ್ ಎಂದು ಗೊತ್ತಾದ ಕೂಡಲೇ ಅವನೊಬ್ಬ ಮಾನಸಿಕ ಅಸ್ವಸ್ಥ ಎಂದು ಹೇಳಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಗೃಹ ಸಚಿವರಾಗಿರಲು ಯಾವುದೇ ಅರ್ಹತೆ ಇಲ್ಲ, ಅವರು ಕೂಡಲೆ ರಾಜೀನಾಮೆಯನ್ನು ನೀಡಬೇಕು ಎಂದು ಆಗ್ರಹಿಸಿದರು. ಎಸ್ಡಿಪಿಐ ಮುಲ್ಕಿ ಮೂಡುಬಿದಿರೆ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷರಾಗಿರುವ ಆಸಿಫ್ ಕೋಟೆಬಾಗಿಲು ಆಧ್ಯಕ್ಷತೆ ವಹಿಸಿ ಪ್ರಸ್ತಾವಿಕವಾಗಿ ಮಾತನಾಡಿದರು. ಇರ್ಷಾದ್ ಬಜ್ಪೆ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News