ಧೋನಿ ದಾಖಲೆ ಹಿಂದಿಕ್ಕಲು ಕೊಹ್ಲಿ, ವಿಲಿಯಮ್ಸನ್ ಕಣ್ಣು

Update: 2020-01-23 18:08 GMT

ಆಕ್ಲೆಂಡ್, ಜ.23: ಇಲ್ಲಿನ ಈಡನ್ ಪಾರ್ಕ್‌ನಲ್ಲಿ ಶುಕ್ರವಾರ ಆರಂಭವಾಗಲಿರುವ ಐದು ಪಂದ್ಯಗಳ ಟ್ವೆಂಟಿ -20 ಸರಣಿಯಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಕಿವೀಸ್ ನಾಯಕ ಕೇನ್ ವಿಲಿಯಮ್ಸನ್ ನಾಯಕರಾಗಿ ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಟ್ವೆಂಟಿ-20ಯಲ್ಲಿ ದಾಖಲಿಸಿದ ಗರಿಷ್ಠ ರನ್ ದಾಖಲೆಯನ್ನು ಹಿಂದಿಕ್ಕುವ ಸಾಧ್ಯತೆ ಇದೆ.

  ಟ್ವೆಂಟಿ-20ಯಲ್ಲಿ ನಾಯಕನಾಗಿ ಎರಡನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಾಗಲು ಕೊಹ್ಲಿಗೆ 81 ರನ್ ಅಗತ್ಯವಿದೆ. ದಕ್ಷಿಣ ಆಫ್ರಿಕಾದ ಎಫ್ ಡು ಪ್ಲೆಸಿಸ್ ಟ್ವೆಂಟಿ-20 ಕ್ರಿಕೆಟ್‌ನಲ್ಲಿ ಗರಿಷ್ಠ ರನ್ ಗಳಿಸಿದ ಆಟಗಾರರಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

ಮಹೇಂದ್ರ ಸಿಂಗ್ ಧೋನಿ ಎರಡನೇ ಸ್ಥಾನದಲ್ಲಿದ್ದಾರೆ. ಕೇನ್ ವಿಲಿಯಮ್ಸನ್ ಮತ್ತು ಕೊಹ್ಲಿ ಕ್ರಮವಾಗಿ 3 ಮತ್ತು 4ನೇ ಸ್ಥಾನದಲ್ಲಿದ್ದಾರೆ. ಧೋನಿ ಅವರನ್ನು ಹಿಂದಿಕ್ಕಲು ವಿಲಿಯಮ್ಸನ್‌ಗೆ ಕೇವಲ 30 ರನ್‌ಗಳ ಅಗತ್ಯವಿದೆ. ಎರಡನೇ ಸ್ಥಾನಕ್ಕಾಗಿ ಕೊಹ್ಲಿ ಕೂಡಾ ಸಜ್ಜ್ಜಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News