ಮೊದಲ ಟ್ವೆಂಟಿ-20: ಭಾರತದ ಗೆಲುವಿಗೆ 204 ರನ್ ಗುರಿ

Update: 2020-01-24 09:34 GMT

ಆಕ್ಲೆಂಡ್, ಜ.24: ಆರಂಭಿಕ ಬ್ಯಾಟ್ಸ್‌ಮನ್ ಮುನ್ರೊ(59, 42 ಎಸೆತ), ಹಿರಿಯ ಬ್ಯಾಟ್ಸ್ ಮನ್ ರಾಸ್ ಟೇಲರ್(ಔಟಾಗದೆ 54, 27 ಎಸೆತ) ಹಾಗೂ ನಾಯಕ ವಿಲಿಯಮ್ಸನ್(51, 26 ಎಸೆತ)ಅರ್ಧಶತಕಗಳ ಕೊಡುಗೆಯ ನೆರವಿನಿಂದ ನ್ಯೂಝಿಲ್ಯಾಂಡ್ ತಂಡ ಭಾರತಕ್ಕೆ ಮೊದಲ ಟ್ವೆಂಟಿ-20 ಅಂತರ್‌ರಾಷ್ಟ್ರೀಯ ಪಂದ್ಯದ ಗೆಲುವಿಗೆ 204 ರನ್ ಗುರಿ ನೀಡಿದೆ.

ಶುಕ್ರವಾರ ಇಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಜಯಿಸಿದ ಭಾರತ ತಂಡ ನ್ಯೂಝಿಲ್ಯಾಂಡ್‌ನ್ನು ಮೊದಲು ಬ್ಯಾಟಿಂಗ್‌ಗೆ ಇಳಿಸಿತು. ಕಿವೀಸ್ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್‌ಗಳ ನಷ್ಟಕ್ಕೆ 203 ರನ್ ಗಳಿಸಿತು.

ಮುನ್ರೊ(59, 42 ಎಸೆತ, 4 ಬೌಂಡರಿ,1 ಸಿಕ್ಸರ್), ಟೇಲರ್(ಔಟಾಗದೆ 54, 27 ಎಸೆತ, 3 ಬೌಂಡರಿ, 3 ಸಿಕ್ಸರ್) ಹಾಗೂ ವಿಲಿಯಮ್ಸನ್(51, 26 ಎಸೆತ, 4 ಬೌಂಡರಿ,4 ಸಿಕ್ಸರ್)ತಂಡದ ಮೊತ್ತವನ್ನು 200ರ ಗಡಿ ದಾಟಿಸಿದರು. ಇನ್ನೋರ್ವ ಆರಂಭಿಕ ಆಟಗಾರ ಗಪ್ಟಿಲ್ 30 ರನ್ ಗಳಿಸಿದರು.

ಗಪ್ಟಿಲ್ ಹಾಗೂ ಮುನ್ರೊ ಮೊದಲ ವಿಕೆಟ್ ಜೊತೆಯಾಟದಲ್ಲಿ 80 ರನ್ ಸೇರಿಸಿ ಉತ್ತಮ ಆರಂಭ ನೀಡಿದರು. ಟೇಲರ್ ಹಾಗೂ ವಿಲಿಯಮ್ಸನ್ 4ನೇ ವಿಕೆಟ್‌ಗೆ 61 ರನ್ ಜೊತೆಯಾಟ ನಡೆಸಿ ತಂಡದ ಮೊತ್ತವನ್ನು ಹಿಗ್ಗಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News