ನ್ಯೂಝಿಲೆಂಡ್ ವಿರುದ್ಧದ ಮೊದಲ ಟಿ20: ಬೃಹತ್ ಮೊತ್ತ ಬೆನ್ನಟ್ಟಿ ಗೆಲುವಿನ ನಗೆ ಬೀರಿದ ಕೊಹ್ಲಿ ಪಡೆ

Update: 2020-01-24 10:29 GMT

ಆಕ್ಲೆಂಡ್: ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡವು ನ್ಯೂಝಿಲೆಂಡ್ ವಿರುದ್ಧ ಭರ್ಜರಿ ಜಯ ಗಳಿಸಿದೆ. ಈ ಮೂಲಕ ಐದು ಪಂದ್ಯಗಳ ಸರಣಿಯಲ್ಲಿ 1-0 ಮೂಲಕ ಮುನ್ನಡೆ ಸಾಧಿಸಿದೆ.

ಗೆಲುವಿಗೆ 204 ರನ್ ಗಳ ಗುರಿ ಬೆನ್ನಟ್ಟಿದ ಭಾರತ ಇನ್ನು ಒಂದು ಓವರ್ ಬಾಕಿ ಇರುವಂತೆ ಗೆಲುವಿನ ಗುರಿ ತಲುಪಿತು. ಕೆ.ಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ಭರ್ಜರಿ ಅರ್ಧಶತಕ ಬಾರಿಸಿದರು.

ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡುವ ಅವಕಾಶ ಪಡೆದ ನ್ಯೂಜಿಲೆಂಡ್‌ ತಂಡ ನಿಗದಿತ 20 ಓವರ್‌ಗಳಲ್ಲಿ 203 ರನ್ ಕಲೆಹಾಕಿ ಭಾರತಕ್ಕೆ ಬೃಹತ್‌ ಗುರಿ ನೀಡಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News