ಇಬ್ಬರು ಮಕ್ಕಳ ಜೊತೆ ನಾಲೆಗೆ ಹಾರಿ ತಾಯಿ ಆತ್ಮಹತ್ಯೆ

Update: 2020-01-24 14:44 GMT

ಮಂಡ್ಯ, ಜ.24: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಇಬ್ಬರು ಮಕ್ಕಳ ಜೊತೆ ತಾಯಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ತಿಬ್ಬನಹಳ್ಳಿ ಬಳಿ ನಡೆದಿದೆ.

ತಾಲೂಕಿನ ಹುಳ್ಳೇನಹಳ್ಳಿ ಗ್ರಾಮದ ಜ್ಯೋತಿ(33) ತನ್ನ ಮಕ್ಕಳಾದ ನಿಸರ್ಗ(7) ಹಾಗೂ ಪವನ್(4) ಜೊತೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಾರ್ವಜನರಿಕರು ತಾಯಿಯನ್ನು ರಕ್ಷಣೆ ಮಾಡಲು ಪ್ರಯತ್ನಿಸಿದರೂ ಆಕೆ ಉಳಿಯಲಿಲ್ಲ. ಇಬ್ಬರು ಮಕ್ಕಳು ನಾಲೆಯಲ್ಲಿ ಕೊಚ್ಚಿಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಿವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News