ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮ

Update: 2020-01-24 15:16 GMT

ಉಡುಪಿ, ಜ.24: ಕರ್ನಾಟಕ ಸರ್ಕಾರದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕಾ ನಿರ್ದೇಶನಾಲಯದ ಆರ್ಥಿಕ ಬೆಂಬಲದಲ್ಲಿ ಬೆಂಗಳೂರಿನ ಕರ್ನಾಟಕ ತಾಂತ್ರಿಕ ಸಲಹಾ ಸೇವಾ ಸಂಸ್ಥೆ (ಟೆಕ್ಸಾಕ್)ಯು ಕರ್ನಾಟಕದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಫೆ.-ಜೂನ್ ಅವಧಿಯಲ್ಲಿ ಹತ್ತು ದಿನಗಳ ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮವನ್ನು ಸಂಯೋಜಿಸಲಿದೆ.

ಸ್ಥಳೀಯ ಜಿಲ್ಲಾ ಕೈಗಾರಿಕಾ ಕೇಂದ್ರಗಳ ಸಹಯೋಗದಲ್ಲಿ ನಡೆಸಲಾಗುವ ಈ ಕಾರ್ಯಕ್ರಮ, ಅ್ಯರ್ಥಿಗಳಿಗೆ ಸ್ವ-ಉದ್ಯಮಗಳನ್ನು ಸ್ಥಾಪಿಸಲು ಬೇಕಾದ ಅರಿವು ಮತ್ತು ಆತ್ಮಸ್ಥೈರ್ಯವನ್ನು ನೀಡುವ ಉ್ದೇಶವನ್ನು ಹೊಂದಿದೆ.

ಇದರಲ್ಲಿ ಭಾಗವಹಿಸಲು ಆಸಕ್ತಿಯಿರುವ ಉಡುಪಿ ಜಿಲ್ಲೆಯ ಅ್ಯರ್ಥಿಗಳು ಜಂಟಿ ನಿರ್ದೇಶಕರ ಕಛೇರಿ, ಜಿಲ್ಲಾ ಕೈಗಾರಿಕಾ ಕೇಂದ್ರ, ಶಿವಳ್ಳಿ ಕೈಗಾರಿಕಾ ಪ್ರದೇಶ ಮಣಿಪಾಲ, ಉಡುಪಿ ಇವರನ್ನು ಸಂಪರ್ಕಿಸಿ ಹೆಚ್ಚಿನ ವಿವರಗಳನ್ನು ಪಡೆದು ಹೆಸರು ನೊಂದಾಯಿಸಿಕೊಳ್ಳಬಹುದು.

ಅಲ್ಲದೇ ಟೆಕ್ಸಾಕಿನ ವೆಬ್‌ಸೈಟ್‌ನಲ್ಲಿ (www.tecsok.com) ಕೂಡ ವಿವರ ಗಳನ್ನು ಪಡೆದು ಆನ್‌ಲೈನ್ ಅರ್ಜಿಗಳನ್ನು ಸಲ್ಲಿಸಬಹುದು. ಹೆಸರು ನೊಂದಾಯಿಸಲು ಫೆ.20ಕೊನೆಯ ದಿನವಾಗಿದೆ. ಹೆಚ್ಚಿನ ವಿವರಗಳಿಗೆ ಕಚೇರಿಯ ದೂರವಾಣಿ ಸಂಖ್ಯೆ: 0820-2575650ನ್ನು ಸಂಪರ್ಕಿಸುವಂತೆ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News