ಉದ್ದೀಪನ ಔಷಧಿ ಬಳಕೆ ವಿರೋಧಿ ಜಾಗೃತಿ ಕಾರ್ಯಕ್ರಮ

Update: 2020-01-24 17:13 GMT

ಮಣಿಪಾಲ, ಜ.24: ಮಣಿಪಾಲ ಅಕಾಡೆಮಿ ಆಪ್ ಹೈಯರ್ ಎಜ್ಯುಕೇಷನ್ (ಮಾಹೆ), ಕೇಂದ್ರ ಸರಕಾರದ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಅಧೀನಕ್ಕೊಳಪಟ್ಟ ನೇಷನಲ್ ಆ್ಯಂಟಿ ಡೋಪಿಂಗ್ ಏಜೆನ್ಸಿ (ನಾಡಾ) ಸಹಯೋಗದೊಂದಿಗೆ ಕ್ರೀಡೆಯಲ್ಲಿ ಉದ್ದೀಪನ ಔಷಧಿ ಬಳಕೆ ವಿರುದ್ಧ ಜಾಗೃತಿ ಮೂಡಿಸುವ ಒಂದು ದಿನದ ಕಾರ್ಯಕ್ರಮವನ್ನು ಜ.28ರಂದು ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ದೈಹಿಕ ಶಿಕ್ಷಣ ಅಧ್ಯಾಪಕರಿಗಾಗಿ ಆಯೋಜಿಸಿದೆ.

ಉಡುಪಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಮಣಿಪಾಲದ ಫಾರ್ಮಸ್ಯೂಟಿಕಲ್ ಕಾಲೇಜಿನ ಸಹಯೋಗದೊಂದಿಗೆ ಕೆಎಂಸಿಯ ಡಾ. ಟಿಎಂಎ ಪೈ ಸಭಾಂಗಣದ ಮೂರನೇ ಮಹಡಿಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಸುಮಾರು 500 ಮಂದಿ ದೈಹಿಕ ಶಿಕ್ಷಣ ಅಧ್ಯಾಪಕರು ಭಾಗವಹಿಸುವ ನಿರೀಕ್ಷೆ ಇದೆ.

ಜ.28ರ ಬೆಳಗ್ಗೆ 9:30ಕ್ಕೆ ಕಾರ್ಯಕ್ರಮವನ್ನು ಭಾರತದ ಮಾಜಿ ಅಂತಾರಾಷ್ಟ್ರೀಯ ಕ್ರಿಕೆಟಿಗ ರಾಬಿನ್ ಸಿಂಗ್ ಉದ್ಘಾಟಿಸಲಿದ್ದು, ಡಿಡಿಪಿಐ ಶೇಷಶಯನ ಕಾರಿಂಜ, ಡಾ.ಎಚ್.ಎಸ್.ಬಲ್ಲಾಳ್ ಅವರು ಪಾಲ್ಗೊಳ್ಳಲಿದ್ದಾರೆ. ನಾಡಾದ ತಜ್ಞರು ಇದರಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಅಲ್ಲದೇ ಅವರು ಜಿಲ್ಲೆಯ ದೈಹಿಕ ಶಿಕ್ಷಕರಿಗೆ ಈ ಕುರಿತು ತರಬೇತಿಯನ್ನೂ ನೀಡಲಿದ್ದಾರೆ ಎಂದು ಮಾಹೆಯ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News