×
Ad

ಕವಿ ಮುದ್ದಣರ ಜನ್ಮದಿನಾಚರಣೆ ಪ್ರಯುಕ್ತ ಅಂಚೆ ಲಕೋಟೆ ಬಿಡುಗಡೆ

Update: 2020-01-24 23:18 IST

ಮಂಗಳೂರು, ಜ.24: ಕವಿ ಮುದ್ದಣರ 150ನೇ ಜನ್ಮ ದಿನಾಚರಣೆಯ ಪ್ರಯುಕ್ತ ನಂದಳಿಕೆ ಶಾಖಾ ಅಂಚೆ ಕಚೇರಿಯಲ್ಲಿ ವಿಶೇಷ ಅಂಚೆ ಲಕೋಟೆಯನ್ನು ಶುಕ್ರವಾರ ಬಿಡುಗಡೆಗೊಳಿಸಲಾಯಿತು.

ಮಂಗಳೂರಿನ ಹಿರಿಯ ಅಂಚೆ ಅಧೀಕ್ಷಕ ಹರ್ಷ ಎನ್. ಅಂಚೆ ಲಕೋಟೆ ಬಿಡುಗಡೆಗೊಳಿಸಿದರು.

ಈ ಸಂದರ್ಭ ಕವಿ ಮುದ್ದಣ ಸ್ಮಾರಕ ಮಿತ್ರ ಮಂಡಳಿಯ ಅಧ್ಯಕ್ಷ ಸುಹಾಸ್ ಹೆಗ್ಡೆ, ಮುದ್ದಣ ಪ್ರತಿಷ್ಠಾನದ ನಿರ್ದೇಶಕ ನಂದಳಿಕೆ ಬಾಲಚಂದ್ರ ರಾವ್, ಕರ್ಣಾಟಕ ಬ್ಯಾಂಕ್ ಜನರಲ್ ಮ್ಯಾನೇಜರ್ ಬಿ.ಚಂದ್ರಶೇಖರ್ ರಾವ್, ಮೂಡುಬಿದಿರೆ ಎಂಸಿಎಸ್ ಬ್ಯಾಂಕ್‌ನ ಸಿಇಒ ಎಂ. ಚಂದ್ರಶೇಖರ್, ಮಹಾಲಿಂಗೇಶ್ವರ ಶಾಲೆಯ ಸಂಚಾಲಕ ವಿ.ಕೆ. ರಾವ್, ಸಹಾಯಕ ಅಂಚೆ ಅಧೀಕ್ಷಕ ಶ್ರೀನಾಥ್ ಎನ್.ಬಿ., ಗ್ರೆಗರಿ ಅತಿಥಿಗಳಾಗಿ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News